ಬೆಂಗಳೂರು: ಯುವ ಕಾಂಗ್ರೆಸ್ ಮುಖಂಡ ಮಹಮ್ಮದ್ ನಲಪಾಡ್ ಅವರು ನಿನ್ನೆ ನಡೆದ ಯುವ ಜನೋತ್ಸವ ಕಾರ್ಯಕ್ರಮವೊಂದರಲ್ಲಿ ಕುಣಿದು ಕುಪ್ಪಳಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೊಗರು ಚಿತ್ರದ ಖರಾಬು ಬಾಸು ಖರಾಬು ಎಂಬ ಹಾಡಿಗೆ ಡ್ಯಾನ್ಸ್ ಮಾಡಿ ನೆರೆದಿದ್ದ ಜನರನ್ನು ರಂಜಿಸಿದ್ದಾರೆ.
ಇದೇ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಸೇರಿ ಇತರ ನಾಯಕರು ಭಾಗಿಯಾಗಿದ್ದರು. ಎಲ್ಲ ಗಣ್ಯರು ತೆರಳಿದ ನಂತರ ರ‍್ಯಾಪರ್ ಚಂದನ್ ಶೆಟ್ಟಿ ಅವರನ್ನು ಕರೆಸಿ ಡ್ಯಾನ್ಸ್ ಮಾಡಿದ್ದಾರೆ.
PublicNext
13/07/2022 10:22 am