ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಥ್ರಾಸ್ ಗೆ ಸಾಂತ್ವನ ಹೇಳಲು ತೆರಳುತ್ತಿದ್ದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಿರುದ್ಧ FIR ದಾಖಲು

ನವದೆಹಲಿ : ಅತ್ಯಾಚಾರ ಸಂತ್ರಸ್ತೆಯ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಲು ಉತ್ತರ ಪ್ರದೇಶದ ಹತ್ರಾಸ್‍ಗೆ ತೆರಳುತ್ತಿದ್ದ ಎಐಸಿಸಿ ಮುಖಂಡ ರಾಹುಲ್ ಗಾಂಧಿ ಹಾಗೂ ಹಾಲಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸೇರಿದಂತೆ 203 ಕಾಂಗ್ರೆಸ್ ಮುಖಂಡರ ವಿರುದ್ಧ ಉತ್ತರ ಪ್ರದೇಶದ ಪೊಲೀಸರು ಎಫ್‌ಐಆರ್ ದಾಖಲಿಸಿ ಬಂಧಿಸಿದ್ದಾರೆ.

ಕರೋನವೈರಸ್ ಸಾಂಕ್ರಾಮಿಕ ರೋಗದ ದೃಷ್ಟಿಯಿಂದ ಜಿಲ್ಲೆಯಲ್ಲಿ ವಿಧಿಸಲಾಗಿರುವ ಸಿಆರ್‌ಪಿಸಿಯ ಸೆಕ್ಷನ್ 144 ಅನ್ನು ಉಲ್ಲಂಘಿಸಿದ್ದಕ್ಕಾಗಿ ಗ್ರೇಟರ್ ನೋಯ್ಡಾದ ಇಕೋಟೆಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ರಾಹುಲ್ ಹಾಗೂ ಪ್ರಿಯಾಂಕಾ ಸಾಗುತ್ತಿದ್ದ ವಾಹನವನ್ನು ತಡೆದ ಬಳಿಕ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಹತ್ರಾಸ್‌ನತ್ತ ಮೆರವಣಿಗೆ ನಡೆಸಿರುವುದಕ್ಕೆ ಸಾಂಕ್ರಾಮಿಕ ಕಾನೂನಿನಡಿ ಸಿಆರ್‌ಪಿಸಿಯ ಸೆಕ್ಷನ್ 144 ಅನ್ನು ಉಲ್ಲಂಘಿಸಿದ್ದಕ್ಕಾಗಿ ಗ್ರೇಟರ್ ನೋಯ್ಡಾದ ಇಕೋಟೆಕ್ ಪೊಲೀಸ್ ಠಾಣೆಯಲ್ಲಿ ಯು.ಪಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಗ್ರೇಟರ್ ನೋಯ್ಡಾದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಾಗುತ್ತಿರುವುದು ಇದೇ ಮೊದಲಲ್ಲ, ಈ ಹಿಂದೆ ಗ್ರೇಟರ್ ನೋಯ್ಡಾದಲ್ಲಿ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಹಿಂದೆ ಅವರನ್ನು ಬಂಧಿಸಲಾಗಿತ್ತು, ರಾಹುಲ್ ಗಾಂಧಿಯನ್ನು ಇಲ್ಲಿ ಬಂಧಿಸುವುದು ಇದು ಎರಡನೇ ಬಾರಿ.

ಸರಿಯಾಗಿ ನಿರ್ವಹಿಸದ ಉತ್ತರಪ್ರದೇಶ ಸರಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಈ ನಡುವೆ ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ಅಕ್ಟೋಬರ್ 12 ರಂದು ಪೊಲೀಸ್ ಹಾಗೂ ಆಡಳಿತದ ಉನ್ನತ ಅಧಿಕಾರಿಗಳಿಗೆ ಹಾಜರಾಗುವಂತೆ ಸಮನ್ಸ್ ಕಳುಹಿಸಿದೆ.

Edited By :
PublicNext

PublicNext

02/10/2020 08:40 am

Cinque Terre

104.85 K

Cinque Terre

11