ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಬಳಿ ನಡೆದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಾರಿಗೆ ಸಚಿವ ಶ್ರೀರಾಮುಲು ಪರಿಹಾರ ಘೋಷಣೆ ಮಾಡಿದ್ದಾರೆ.
ದುರ್ಘಟನೆಯಲ್ಲಿ ಮೃತಪಟ್ಟ ಕುಟುಂಬದವರಿಗೆ ಸರ್ಕಾರದಿಂದ 5 ಲಕ್ಷ ರೂಪಾಯಿ ಹಾಗೂ ವೈಯಕ್ತಿಕವಾಗಿ 1 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ಇನ್ನು ಗಾಯಯಾಳುಗಳಿಗೆ 50 ಸಾವಿರ ರೂ. ಪರಿಹಾರ ನೀಡುವುದಾಗಿ ಹೇಳಿದ್ದಾರೆ. ಇದಕ್ಕೂ ಮುನ್ನ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಿ.ಶ್ರೀರಾಮುಲು ಅವರು ಮೃತರ ಕುಟುಂಬಗಳಿಗೆ ಸಂತ್ವಾನ ಹೇಳಿದ್ದಾರೆ.
PublicNext
19/03/2022 04:57 pm