ಬೆಳಗಾವಿ: ಕ್ರೂಸರ್ ವಾಹನ ನಾಲೆಗೆ ಉರುಳಿದ ಪರಿಣಾಮ 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗಾವಿಯ ಕಣಬರಗಿ ಬಳಿ ಈ ಘಟನೆ ನಡೆದಿದೆ.
ಈ ಘಟನೆಗೆ ಕಂಬನಿ ಮಿಡಿದಿರುವ ಸಿಎಂ ಬಸವರಾಜ್ ಬೊಮ್ಮಾಯಿ ಪಬ್ಲಿಕ್ ನೆಕ್ಸ್ಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಅವರ ಸಂತಾಪ ಸೂಚಕ ಬರಹ ಇಲ್ಲಿದೆ.
'ಬೆಳಗಾವಿ ಬಳಿ ಇಂದು ನಡೆದ ಅಪಘಾತದಲ್ಲಿ 7 ಜನ ಮೃತಪಟ್ಟು, ಹಲವರು ಗಾಯಗೊಂಡಿರುವ ವಿಷಯ ತಿಳಿದು ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.
'ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ರೂ. 5 ಲಕ್ಷ ಪರಿಹಾರ ನೀಡಲಾಗುವುದು' ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
PublicNext
26/06/2022 01:37 pm