ನವದೆಹಲಿ : ಅನ್ನದಾತರು ಕೇಂದ್ರ ಸರ್ಕಾರ ಜಾರಿ ಮಾಡಿರುವ ಕೃಷಿ ಮಸೂದೆ ವಿರೋಧಿಸಿ ಇಂದು ಭಾರತ್ ಬಂದ್ ಗೆ ಕರೆ ನೀಡಿದ್ದರು.
ಕೇಂದ್ರ ಸರ್ಕಾರದ ಹೊಸ ಕೃಷಿ ನೀತಿಗಳ ವಿರುದ್ಧ ಭಾರಿ ಹೋರಾಟ ನಡೆಯುತ್ತಿದೆ.
ಇಂದು ಕೇಂದ್ರ ಸರ್ಕಾರದ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಮಾತುಕತೆಗೆ ಆಹ್ವಾನಿಸಿದೆ.
ಸಂಜೆ 7 ಗಂಟೆಗೆ ಮಾತುಕತೆಗೆ ಬರುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರೈತರಿಗೆ ಕರೆ ನೀಡಿದ್ದಾರೆ.
ಪ್ರತಿಭಟನೆ 11ನೇ ದಿನಕ್ಕೆ ಕಾಲಿಟ್ಟಿದೆ. ಕೇಂದ್ರ ಸರ್ಕಾರದ ಜೊತೆ ರೈತರು ನಡೆಸಿದ 5 ಸುತ್ತಿನ ಮಾತುಕತೆ ವಿಫಲವಾಗಿದೆ. ಡಿಸೆಂಬರ್ 9ರಂದು 6ನೇ ಸುತ್ತಿನ ಮಾತುಕತೆ ನಿಗದಿಯಾಗಿದೆ.
ಆದರೆ, ಮಂಗಳವಾರ ರೈತರು ಭಾರತ್ ಬಂದ್ ನಡೆಸಿದ ಹಿನ್ನಲೆಯಲ್ಲಿ ಸಂಜೆ ಅವರ ಜೊತೆ ಗೃಹ ಸಚಿವ ಅಮಿತ್ ಶಾ ಮಾತುಕತೆ ನಡೆಸಲಿದ್ದಾರೆ. ಈ ಮಾತುಕತೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
"ಅಮಿತ್ ಶಾ ಅವರು ದೂರವಾಣಿ ಕರೆ ಮಾಡಿದ್ದರು. ಸಂಜೆ 7 ಗಂಟೆಗೆ ಮಾತುಕತೆಗೆ ಬರುವಂತೆ ಆಹ್ವಾನ ನೀಡಿದ್ದಾರೆ.
PublicNext
08/12/2020 04:47 pm