ಲಖನೌ: ಲಖಿಂಪುರ್ ಖೇರಿಯಲ್ಲಿ ಭಾನುವಾರ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ 8 ಮಂದಿ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ,ಹಿಂಸಾಚಾರದಲ್ಲಿ ಮೃತಪಟ್ಟರ ಕುಟುಂಬಕ್ಕೆ 45 ಲಕ್ಷ ರೂ. ಪರಿಹಾರದ ಜೊತೆಗೆ ಒಬ್ಬ ಕುಟುಂಬ ಸದಸ್ಯನಿಗೆ ಸರ್ಕಾರಿ ನೌಕರಿ ನೀಡಲಾಗುವುದು ಎಂದು ಉತ್ತರ ಪ್ರದೇಶದ ಸರ್ಕಾರ ಘೋಷಣೆ ಮಾಡಿದೆ.
ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಭೇಟಿಯನ್ನು ವಿರೋಧಿಸಿ ರೈತರು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಹಿಂಸಾಚಾರ ಭುಗಿಲೆದ್ದ ಪರಿಣಾಮ ರೈತರು ಮತ್ತು ಬಿಜೆಪಿ ಕಾರ್ಯಕರ್ತರು ಸೇರಿ 8 ಮಂದಿ ನಿನ್ನೆ ಮೃತಪಟ್ಟಿದ್ದರು.
PublicNext
04/10/2021 01:25 pm