ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ನೂತನ 3 ಕೃಷಿ ಕಾನೂನು ವಾಪಸ್- ಪ್ರಧಾನಿ ಮೋದಿ ಘೋಷಣೆ

ನವದೆಹಲಿ: ನೂತನವಾಗಿ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಗುರುನಾನಕ್ ಜಯಂತಿ ಹಿನ್ನೆಲೆಯಲ್ಲಿ ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದರು. ಉತ್ತರ ಪ್ರದೇಶ ಪ್ರವಾಸಕ್ಕೂ ಮುನ್ನ ಮಾತನಾಡಿದ ಅವರು, "ಎಲ್ಲಾ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ. ನಮ್ಮ ಸರ್ಕಾರವು ರೈತರ ಕಲ್ಯಾಣಕ್ಕಾಗಿ ಅದರಲ್ಲೂ ವಿಶೇಷವಾಗಿ ಸಣ್ಣ ರೈತರ ಕಲ್ಯಾಣಕ್ಕಾಗಿ, ದೇಶದ ಕೃಷಿ ಹಿತದೃಷ್ಟಿಯಿಂದ, ದೇಶದ ಹಿತದೃಷ್ಟಿಯಿಂದ, ಹಳ್ಳಿಯ ಬಡವರ ಉಜ್ವಲ ಭವಿಷ್ಯಕ್ಕಾಗಿ, ಸಂಪೂರ್ಣ ಪ್ರಾಮಾಣಿಕತೆಯಿಂದ ಒಳ್ಳೆಯ ಉದ್ದೇಶದಿಂದ ಈ ಕಾನೂನನ್ನು ತಂದಿದ್ದೇವು" ಎಂದು ತಿಳಿಸಿದ್ದಾರೆ.

ಯಾವುದು ನೂತನ ಕೃಷಿ ಕಾಯ್ದೆಗಳು?

ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ ಕಾಯ್ದೆ-2020

ರೈತರ ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ-2020

ಅಗತ್ಯ ಸರಕುಗಳ ತಿದ್ದುಪಡಿ ಕಾಯ್ದೆ-2020

Edited By : Vijay Kumar
PublicNext

PublicNext

19/11/2021 09:36 am

Cinque Terre

57.36 K

Cinque Terre

30

ಸಂಬಂಧಿತ ಸುದ್ದಿ