ನವದೆಹಲಿ: ಭಾರಿ ವಿವಾದ ಸೃಷ್ಟಿಸಿದ್ದ ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ. ಜೊತೆಗೆ ರೈತರು ಪ್ರತಿಭಟನೆಯನ್ನು ವಾಪಸ್ ಪಡೆಯುವಂತೆ ಕೋರಿಕೊಂಡಿದ್ದಾರೆ. ಆದರೆ ಈ ಘೋಷಣೆ ಬೆನ್ನಲ್ಲೇ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ಮತ್ತು ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್, ತಾವು ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಾಕೇಶ್ ಟಿಯಾಯತ್, "ಈ ಆಂದೋಲನವನ್ನು ತಕ್ಷಣವೇ ಹಿಂಪಡೆಯುವುದಿಲ್ಲ. ಸಂಸತ್ತಿನಲ್ಲಿ ಕೃಷಿ ಕಾನೂನುಗಳನ್ನು ರದ್ದುಪಡಿಸುವ ದಿನಕ್ಕಾಗಿ ನಾವು ಕಾಯುತ್ತೇವೆ. ಎಂಎಸ್‌ಪಿ ಜತೆಗೆ ರೈತರ ಇತರೆ ಸಮಸ್ಯೆಗಳನ್ನೂ ಕೇಂದ್ರ ಸರ್ಕಾರ ಚರ್ಚಿಸಬೇಕು" ಎಂದು ಆಗ್ರಹಿಸಿದ್ದಾರೆ.
PublicNext
19/11/2021 12:20 pm