ನವದೆಹಲಿ: ವಿವಾದಿತ ಮೂರು ಕೃಷಿ ಕಾಯ್ದೆಗಳ ರದ್ದತಿ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ.ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮೂರು ಕೃಷಿ ಮಸೂದೆಗಳನ್ನು ವಾಪಾಸ್ ಪಡೆಯುವ ಮಸೂದೆಗೆ ಒಪ್ಪಿಗೆ ಸೂಚಿಸಲಾಗಿತ್ತು.ಈ ಎಲ್ಲಾ ವಿದ್ಯಮಾನದ ಬಳಿಕ ಇಂದು ಲೋಕಸಭೆಯಲ್ಲಿ ಕೃಷಿ ಸಚಿವರು ವಿವಾದಿತ ಮೂರು ಕೃಷಿ ಮಸೂದೆಗಳನ್ನು ವಾಪಾಸ್ ಪಡೆಯಲು ಮಸೂದೆ ಮಂಡಿಸಿದರು.
ವಿಪಕ್ಷಗಳ ಪ್ರತಿಭಟನೆ, ಗದ್ದಲದ ನಡುವೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಲೋಕಸಭೆಯಲ್ಲಿ ಕೃಷಿ ಕಾಯ್ದೆ ರದ್ದು ಮಸೂದೆ 2021 ಅನ್ನು ಮಂಡಿಸಿದ್ದರು. ಇನ್ನು ವಿಪಕ್ಷಗಳು ಕಾಯ್ದೆ ರದ್ದತಿ ಬಗ್ಗೆ ಚರ್ಚಿಸಲು ಅವಕಾಶ ಕೋರಿದ್ದರು. ಆದರೆ ಯಾವುದೇ ಚರ್ಚೆಯಿಲ್ಲದೇ ಲೋಕಸಭೆಯಲ್ಲಿ ಮಸೂದೆಗಳನ್ನು ವಾಪಾಸ್ ಪಡೆಯೋದಕ್ಕೆ ಒಪ್ಪಿಗೆ ಸೂಚಿಸಲಾಗಿದೆ.
PublicNext
29/11/2021 03:28 pm