ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕರ್ನಾಟಕ ಬಜೆಟ್ 2022: ಕೃಷಿ ಕ್ಷೇತ್ರಕ್ಕೆ 33,700 ಕೋಟಿ ಘೋಷಣೆ- ರೈತರಿಗೆ ಏನೆಲ್ಲಾ ಸಿಕ್ಕಿದೆ?

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಂಡಿಸಿದ ಚೊಚ್ಚಲ ಬಜೆಟ್‌ನಲ್ಲಿ ಮೊದಲಿಗೆ ಕೃಷಿ ಕ್ಷೇತ್ರದ ಅನುದಾನವನ್ನು ಘೋಷಿಸಿದರು. ಈ ಮೂಲಕ ರೈತರಿಗೆ ಬಂಪರ್ ಗಿಫ್ಟ್ ನೀಡಿದ್ದಾರೆ.

2022-23ನೇ ಸಾಲಿನಲ್ಲಿ ಕೃಷಿ ಕ್ಷೇತ್ರಕ್ಕೆ 33,700 ಕೋಟಿ ರೂಪಾಯಿ ಘೋಷಣೆ ಮಾಡಿದ ಸಿಎಂ ಬಿಎಸ್ ಬಸವರಾಜ ಬೊಮ್ಮಾಯಿ ಅವರು, ರೈತ ಶಕ್ತಿ ಹೊಸ ಯೋಜನೆಯನ್ನು ಘೋಷಿಸಿದ್ದಾರೆ. ರಾಜ್ಯದಲ್ಲಿ ರೈತ ಶಕ್ತಿ ಹೊಸ ಯೋಜನೆ ಘೋಷಣೆ ಮಾಡಲಾಗಿದ್ದು, ಈ ಯೋಜನೆ ಮೂಲಕ ರೈತರಿಗೆ ಯಂತ್ರೋಪಕರಣ ಉಪಯೋಗಕ್ಕೆ ಸಹಾಯಧನ, 250 ರೂ. ಡೀಸೆಲ್ ಸಹಾಯಧನ ನೀಡಲಾಗುವುದು. 500 ಕೋಟಿ ರೂ. ಯೋಜನೆಗೆ ಒದಗಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

* ರೈತ ಶಕ್ತಿ ನೂತನ ಯೋಜನೆಯಡಿ ಕೃಷಿ ಯಂತ್ರೋಪಕರಣಗಳ ಬಳಕೆ ಉತ್ತೇಜನಕ್ಕೆ ಪ್ರತಿ ಎಕರೆಗೆ 250 ರೂ. ಗಳಂತೆ ಡೀಸೆಲ್ ಸಹಾಯಧನ. ಇದಕ್ಕಾಗಿ 600 ಕೋಟಿ ರೂ. ಅನುದಾನ.

* ಕೆಪೆಕ್ ಮೂಲಕ ಕೃಷಿ ಉತ್ಪನ್ನಗಳ ಕೊಯ್ಲಿನೋತ್ತರ ನಿರ್ವಹಣೆ, ಮಾರಾಟ ಮತ್ತು ರಫ್ತು ಮಾಡಲು 50 ಕೋಟಿ ರೂ. ಹಂಚಿಕೆ,

* ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ಮಿನಿ ಆಹಾರ ಪಾರ್ಕ್ ಸ್ಥಾಪನೆ.

* ದ್ರಾಕ್ಷಿ ಬೆಳೆಯ ಸಂಗ್ರಹಣೆ, ಸಂಸ್ಕರಣೆ ಮತ್ತು ಸಾಗಾಣಿಕೆಗೆ ವಿಜಯಪುರ ಜಿಲ್ಲೆ, ತೊರವಿಯಲ್ಲಿ 35 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಶೈತ್ಯ ಸಂಗ್ರಹ ವ್ಯವಸ್ಥೆ ಸ್ಥಾಪನೆ ಹಾಗೂ ಶೀತಲೀಕೃತ ಸರಕು ಸಾಗಣೆ ವಾಹನ ಪೂರೈಕೆ.

* ಬಡ್ಡಿ ರಿಯಾಯಿತಿ ಯೋಜನೆಯಡಿ 3 ಲಕ್ಷ ಹೊಸ ರೈತರೂ ಸೇರಿದಂತೆ ಒಟ್ಟು 33 ಲಕ್ಷ ರೈತರಿಗೆ 24,000 ಕೋಟಿ ಸಾಲ ವಿತರಣೆ ಗುರಿ.

* 2 ಲಕ್ಷ ಹೆಕ್ಟೇರ್‌ಗಳಲ್ಲಿ ಸಾವಯವ ಕೃಷಿ ಆರಂಭ.

* ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನಲ್ಲಿ ಹೊಸ ಕೃಷಿ ವಿವಿ ಸ್ಥಾಪನೆ.

* ಬಳ್ಳಾರಿಯ ಹಗರಿಬೊಮ್ಮನಹಳ್ಳಿಯಲ್ಲಿ ಕೃಷಿ ಕಾಲೇಜು ಸ್ಥಾಪನೆ.

* 1 ಸಾವಿರ ಎಕರೆ ಪ್ರದೇಶದಲ್ಲಿ ನೈಸರ್ಗಿಕ ಕೃಷಿ ಪದ್ಧತಿಯಲ್ಲಿ ಸಾರಜನಕ ಸ್ಥಿರೀಕರಣ.

* ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಸ್ಥಾಪಿಸಲು 50 ಕೋಟಿ ರೂ.

* ಕುರಿಗಾರರಿಗೆ ಕುರಿದೊಡ್ಡಿ ನಿರ್ಮಿಸಲು ಸಹಾಯಧನ. ಕುರಿಗಾಯಿಗಳಿಗೆ 5 ಲಕ್ಷ ರೂಪಾಯಿ ವಿಮೆ

* ರೈತರ ಆದಾಯ ಹೆಚ್ಚಿಸಲು ಸೆಕೆಂಡರಿ ಕೃಷಿ ನಿರ್ದೇಶನಾಲಯ ಸ್ಥಾಪನೆ.

* ಕೃಷಿ ಇಲಾಖೆಗೆ 8,457 ಕೋಟಿ ರೂಪಾಯಿ

* ರೈತರಿಗೆ 2 ಸಾವಿರ ಗೋ ತಳಿಗಳ ವಿತರಣೆ. ಗೋವು ಉತ್ಪನ್ನಗಳ ವಿತರಣೆಗೆ ಗೋವು ಸಹಕಾರ ಸಂಘ ಸ್ಥಾಪನೆ

* ಗ್ರಾಮೀಣ ರೈತರಿಗೆ ಆರೋಗ್ಯ ಸೇವೆ ಒದಗಿಸಲು ಪರಿಷ್ಕೃತ ರೂಪದಲ್ಲಿ ಯಶಸ್ವಿನಿ ಯೋಜನೆ ಮರು ಜಾರಿ. ಈ ಸಂಬಂಧ ಸರ್ಕಾರದಿಂದ 300 ಕೋಟಿ ರೂ. ಅನುದಾನ.

* 57 ತಾಲ್ಲೂಕುಗಳಲ್ಲಿ 642 ಕೋಟಿ ರೂ. ವೆಚ್ಚದಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ - ಜಲಾನಯನ ಅಭಿವೃದ್ಧಿ ಘಟಕ - 2.0 ಜಾರಿ.

* ಬಳ್ಳಾರಿ ಜಿಲ್ಲೆಯ ಹಗರಿ ಹಾಗೂ ಬೆಳಗಾವಿ ಜಿಲ್ಲೆ, ಅಥಣಿಯಲ್ಲಿ ನೂತನ ಕೃಷಿ ಕಾಲೇಜು ಸ್ಥಾಪನೆ.

Edited By : Vijay Kumar
PublicNext

PublicNext

04/03/2022 03:30 pm

Cinque Terre

43.89 K

Cinque Terre

0

ಸಂಬಂಧಿತ ಸುದ್ದಿ