ನವದೆಹಲಿ: ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ಕರೆತರುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು ಮತ್ತು ಸಿಲುಕಿರುವ ಭಾರತೀಯರ ಸ್ಥಳಾಂತರಕ್ಕಾಗಿ ಸರ್ಕಾರವು ನಾಲ್ಕು ಮಂತ್ರಿಗಳನ್ನು ಉಕ್ರೇನ್‌ಗೆ ಕಳುಹಿಸಲು ನಿರ್ಧರಿಸಿದೆ.
ಮೂಲಗಳ ಪ್ರಕಾರ, ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಕೇಂದ್ರ ಸಚಿವರಾದ ಹರ್‌ದೀಪ್ ಸಿಂಗ್ ಪುರಿ, ಕಿರಣ್ ರಿಜಿಜು ಮತ್ತು ಜನರಲ್ ವಿಕೆ ಸಿಂಗ್ ಅವರು ಉಕ್ರೇನ್‌ಗೆ ತೆರಳಿ ವಿದ್ಯಾರ್ಥಿಗಳನ್ನು ಸ್ಥಳಾಂತರಿಸುವ ಕಾರ್ಯಾಚರಣೆಯಲ್ಲಿ ಸಮನ್ವಯಗೊಳಿಸಲು ಮತ್ತು ಸಹಾಯ ಮಾಡಲಿದ್ದಾರೆ. ಈ ನಾಲ್ವರು ಕೇಂದ್ರ ಸಚಿವರು ಭಾರತದ ವಿಶೇಷ ಪ್ರತಿನಿಧಿಗಳಾಗಿ ತೆರಳಲಿದ್ದಾರೆ. ಉಕ್ರೇನ್‌ನಲ್ಲಿನ ಪರಿಸ್ಥಿತಿಗೆ ಸಂಬಂಧಿಸಿದಂತೆ ಕಳೆದ 24 ಗಂಟೆಗಳಲ್ಲಿ ಮೋದಿ ನೇತೃತ್ವದಲ್ಲಿ ನಡೆದ ಎರಡನೇ ಸಭೆ ಇದಾಗಿದೆ.
ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್, ವಿದೇಶಾಂಗ ಕಾರ್ಯದರ್ಶಿ ಹರ್ಷ್ ಶ್ರಿಂಗ್ಲಾ, ಕ್ಯಾಬಿನೆಟ್ ಕಾರ್ಯದರ್ಶಿ ರಾಜೀವ್ ಗೌಬಾ ಮತ್ತು ಹಲವಾರು ಹಿರಿಯ ಅಧಿಕಾರಿಗಳೊಂದಿಗೆ ಎರಡು ಗಂಟೆಗಳ ಸುದೀರ್ಘ ಸಭೆ ನಡೆಸಿದರು. ಸೋಮವಾರ ಮತ್ತೊಂದು ಸಭೆ ನಡೆಸಿದರು. ಸಭೆಯಲ್ಲಿ, ಪ್ರಧಾನಿ ಮೋದಿ ಮತ್ತೊಮ್ಮೆ ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಸ್ಥಳಾಂತರಿಸುವಿಕೆಯನ್ನು ಖಚಿತಪಡಿಸುವುದು ದೇಶದ ಪ್ರಮುಖ ಆದ್ಯತೆಯಾಗಿದೆ ಎಂದು ಮತ್ತೊಮ್ಮೆ ಹೇಳಿದ್ದಾರೆ.
PublicNext
28/02/2022 02:21 pm