ರಷ್ಯಾ ಮತ್ತು ಉಕ್ರೇನ್ ಯುದ್ಧ ಮುಂದುವರೆದ ಬೆನ್ನಲ್ಲೇ ಭಾರತದ ಪ್ರಧಾನಿ ಕಳೆದ 24 ಗಂಟೆಗಳಲ್ಲಿ ಉಕ್ರೇನ್ ಬಿಕ್ಕಟ್ಟಿನ ಕುರಿತು ಮೂರನೇ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.
ಸದ್ಯ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನಿ ಯುದ್ಧ ಪೀಡಿತ ಉಕ್ರೇನ್ ನಲ್ಲಿನ ಪರಿಸ್ಥಿತಿ ಕುರಿತು ಚರ್ಚಿ ನಡೆಸಿದ್ದಾರೆ. ಸಭೆಯಲ್ಲಿ ಉನ್ನತ ಸಚಿವರು ಮತ್ತು ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಉಕ್ರೇನ್ ಸರ್ಕಾರದ ಮನವಿಯ ನಂತರ, ಗುರುವಾರದಿಂದ ರಷ್ಯಾದ ಪಡೆಗಳು ಮುತ್ತಿಗೆ ಹಾಕಿದ ರಾಷ್ಟ್ರಕ್ಕೆ ವೈದ್ಯಕೀಯ ಸರಬರಾಜು ಸೇರಿದಂತೆ ಮಾನವೀಯ ನೆರವು ಕಳುಹಿಸಲು ಭಾರತ ಒಪ್ಪಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.
ಸಚಿವರಾದ ಹರ್ದೀಪ್ ಪುರಿ, ಜ್ಯೋತಿರಾದಿತ್ಯ ಸಿಂಧಿಯಾ, ಕಿರಣ್ ರಿಜಿಜು ಮತ್ತು ವಿಕೆ ಸಿಂಗ್ ಅವರು ವಿಶೇಷ ಭಾರತೀಯ ರಾಯಭಾರಿಗಳಾಗಿ ಉಕ್ರೇನ್ ಸುತ್ತಮುತ್ತಲಿನ ದೇಶಗಳಿಗೆ ತೆರಳಿ ಅಲ್ಲಿನ ಭಾರತೀಯ ನಾಗರಿಕರನ್ನು ಸ್ಥಳಾಂತರಿಸಲು ಸಹಾಯ ಮಾಡುತ್ತಿದ್ದಾರೆ.
PublicNext
28/02/2022 08:54 pm