ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಥಣಿ: ಯೋಗಿ ಮಾದರಿ ಮೀರಿದ ಕಾನೂನು ಶೀಘ್ರ ಜಾರಿಗೆ; ಲಕ್ಷ್ಮಣ ಸವದಿ ಎಚ್ಚರಿಕೆ

ದೇಶದಲ್ಲಿ ಸಂಪೂರ್ಣವಾಗಿ ಹಿಂದೂ ರಾಷ್ಟ್ರದ ವಿರುದ್ಧವಾಗಿ ಇಸ್ಲಾಮೀಕರಣ ಮಾಡುವ ಹುನ್ನಾರ ನಡೆಯುತ್ತಿದೆ. ಹೀಗಾಗಿ ಸರಣಿ ಕೊಲೆಗಳು ನಡೆಯುತ್ತಿವೆ ಎನ್ನುವ ಮೂಲಕ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೊಸ ಚರ್ಚೆ ಹುಟ್ಟುಹಾಕಿದ್ದಾರೆ.

ಈ ಕುರಿತು ಅಥಣಿ ತಾಲೂಕಿನ ರಡ್ಡೆರಹಟ್ಟಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಕಾರ್ಯಕರ್ತರ ಕೊಲೆ ಖಂಡನೀಯ. ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಒತ್ತಾಯಿಸಿದರು. ಯಾರೇ ಆಗಲಿ ಸಮಾಜ ವಿರೋಧಿ ಕೃತ್ಯಗಳಲ್ಲಿ ಭಾಗಿಯಾದರೆ ಸರ್ಕಾರ ಸಹಿಸಲ್ಲ. ಉಗ್ರ ಕಾನೂನು ಜಾರಿಗೆ ತಂದು ಶಿಕ್ಷಿಸಲಾಗುವುದು ಎಂದು ಎಚ್ಚರಿಸಿದರು.

ಸಮಾಜಘಾತುಕ ಶಕ್ತಿಗಳನ್ನು ನಿಗ್ರಹಿಸಿ ಮಟ್ಟ ಹಾಕಲು ಕಾನೂನಿನಲ್ಲಿ ಮಹತ್ತರ ಬದಲಾವಣೆ ತರುವ ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ಸಿಎಂ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಕಾನೂನು ತಿದ್ದುಪಡಿ ವಿಧೇಯಕವನ್ನು ಮಂಡಿಸುವ ಚಿಂತನೆ ನಡೆದಿದೆ.

ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಸಾಮೂಹಿಕ ರಾಜೀನಾಮೆ ವಿಷಯಕ್ಕೆ ಪ್ರತಿಕ್ರಿಯಿಸಿದ ಸವದಿ, ಸಹಜವಾಗಿ ಕಾರ್ಯಕರ್ತರ ಮನಸ್ಸಿಗೆ ನೋವಾಗಿರುತ್ತದೆ. ಅವರ ರಾಜೀನಾಮೆಯ ಉದ್ದೇಶ ಕೇವಲ ಸರ್ಕಾರವನ್ನು ಎಚ್ಚರಿಸುವುದಾಗಿದೆ ಅಷ್ಟೇ. ಬದಲಾಗಿ ಬೇರೆನೂ ಇಲ್ಲ. ಕಾರ್ಯಕರ್ತರೆಲ್ಲ ಕುಟುಂಬದ ಸದಸ್ಯರಿದ್ದಂತೆ ಎಂದು ರಾಜೀನಾಮೆ ವಿಷಯಕ್ಕೆ ತೇಪೆ ಹಚ್ಚಿದರು.

ಪ್ರಸ್ತುತ ರಾಜ್ಯದಲ್ಲಿರುವ ಕಾನೂನು ದುಷ್ಟ ಶಕ್ತಿಗಳನ್ನು ನಿಗ್ರಹಿಸಲು ಸಾಲದು. ಅದಕ್ಕಾಗಿ ಸಮಾಜ ಘಾತುಕ, ಕೊಲೆಗಡುಕ ಶಕ್ತಿಗಳ ದಮನ ಮಾಡಲು ರಾಜ್ಯದಲ್ಲಿ ಯೋಗಿ ಮಾದರಿಯನ್ನೂ ಮೀರಿದ ವಿಶೇಷ ಕಾನೂನನ್ನು ಶೀಘ್ರದಲ್ಲೇ ಜಾರಿಗೆ ತರುತ್ತೇವೆ ಎಂದು ಹೇಳಿ, ಸರ್ಕಾರವನ್ನು ಸಮರ್ಥಿಸಿಕೊಂಡರು.

ವರದಿ: ಸಂತೋಷ ಬಡಕಂಬಿ

Edited By :
PublicNext

PublicNext

30/07/2022 05:42 pm

Cinque Terre

53.65 K

Cinque Terre

2

ಸಂಬಂಧಿತ ಸುದ್ದಿ