ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಲವಂತದ ಮತಾಂತರ ನಿಷೇಧ ಕಾನೂನು ಜಾರಿಗೆ ಚಿಂತನೆ: ಸಿಎಂ ಬೊಮ್ಮಾಯಿ ಎಚ್ಚರಿಕೆ

ಬೆಂಗಳೂರು: ಪ್ರಚೋದನೆ, ಪ್ರಲೋಭನೆ, ಆಮಿಷ ಅಥವಾ ಬಲವಂತದ ಮತಾಂತರ ನಡೆಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇಂತಹ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಕಾನೂನು ರೀತ್ಯಾ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಖಡಕ್ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, "ಬಲವಂತದ ಮತಾಂತರವನ್ನು ಸಂಪೂರ್ಣವಾಗಿ ನಿಯಂತ್ರಿಸಲು ಕಾನೂನು ರೂಪಿಸುವ ಕುರಿತು ಗಂಭೀರ ಚಿಂತನೆ ನಡೆಯುತ್ತಿದೆ" ಎಂದು ಭರವಸೆ ನೀಡಿದ್ದಾರೆ.

ಈ ಮುನ್ನ ಕೆಲವು ದಿನಗಳ ಹಿಂದೆ ವಿಧಾನಸಭಾ ಅಧಿವೇಶನದಲ್ಲಿಯೂ ಬಲವಂತದ ಮತಾಂತರದ ಕುರಿತು ಪ್ರಸ್ತಾಪ ಬಂದಿತ್ತು. ವಿಧಾನಸಭೆಯಲ್ಲಿ ಇಂದು ಕೆಲ ಸದಸ್ಯರು ಈಕುರಿತು ಪ್ರಸ್ತಾಪಿಸಿದ್ದರು. ಒತ್ತಾಯಪೂರ್ವಕವಾಗಿ ಮತಾಂತರ ಕಾನೂನುಬಾಹಿರ ಆಗಿದೆ. ಹಾಗಾಗಿ ಬೇರೆ ಬೇರೆ ರಾಜ್ಯಗಳ ಕಾಯ್ದೆಯನ್ನು ಪರಿಶೀಲನೆ ಮಾಡಿ ರಾಜ್ಯದಲ್ಲೂ ಕಾಯ್ದೆ ಜಾರಿ ಮಾಡುವ ಬಗ್ಗೆ ಚರ್ಚಿಸ್ತೇವೆ ಎಂದು ವಿಧಾನಸೌಧದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದರು.

Edited By : Vijay Kumar
PublicNext

PublicNext

28/09/2021 11:04 pm

Cinque Terre

102.98 K

Cinque Terre

10

ಸಂಬಂಧಿತ ಸುದ್ದಿ