ಬೆಂಗಳೂರು: ಮಠಕ್ಕೆ ನೀಡಲಾದ ಅನುದಾನದಲ್ಲಿ 30 ಪರ್ಸೆಂಟ್ ಕಮೀಷನ್ ಕೊಡಬೇಕು ಎಂದು ಬಾಲೆಹೊಸೂರಿನ ದಿಂಗಾಲೇಶ್ವರ ಶ್ರೀಗಳು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ನಾನು ಅನುದಾನವನ್ನೇ ಪಡೆದಿಲ್ಲ. ಈ ಹಿಂದೆ ಬಂದಿದ್ದ ಅನುದಾನವನ್ನು ವಾಪಸ್ ಸರ್ಕಾರಕ್ಕೆ ಕಳುಹಿಸಿದ್ದೇನೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ದಿಂಗಾಲೇಶ್ವರರು ಯಾವ ಆಧಾರದ ಮೇಲೆ ಹೇಳಿದ್ದಾರೋ ಗೊತ್ತಿಲ್ಲ. ಬಹುಶಃ ಅವರ ಬಳಿ ಆ ಕಮೀಷನ್ ಆರೋಪದ ಬಗ್ಗೆ ಮಾಹಿತಿ ಇರಬಹುದು. ಆದರೆ, ನಮಗಂತೂ ಸರ್ಕಾರದ ಅನುದಾನ ಬೇಕಾಗಿಲ್ಲ. ಸಮುದಾಯಕ್ಕೆ 2ಎ ಮೀಸಲಾತಿ ಬೇಕಷ್ಟೇ ಎಂದರು. ಮೀಸಲಾತಿ ನೀಡಲು ಸರ್ಕಾರಕ್ಕೆ ಏ. 21ರ ಅಂತಿಮ ಗಡುವು ನೀಡಲಾಗಿದೆ. ಇದು ಮಾಡು ಇಲ್ಲವೇ ಮಡಿ ಹೋರಾಟ. ಸ್ಪಂದಿಸದಿದ್ದರೆ, ಮುಂದಾಗುವ ಅನಾಹುತಗಳಿಗೆ ಸರ್ಕಾರವೇ ಹೊಣೆ ಎಂದು ಇದೇ ವೇಳೆ ಎಚ್ಚರಿಸಿದರು.
PublicNext
19/04/2022 08:23 am