ಕೂಡಲಸಂಗಮ: ಪಂಚಮಸಾಲಿ ಮೀಸಲಾತಿ ಹೋರಾಟ ಎರಡು ತಿಂಗಳು ಮುಂದಕ್ಕೆ ಹೋಗಿದೆ.ಈ ಬಗ್ಗೆ ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವ್ರ ಪಂಚಮಸಾಲಿ ಸಮುದಾಯಕ್ಕೆ ಮೀಸಲಾಯಿತಿ ಭರವಸೆ ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿಯೇ ನಮ್ಮ ಹೋರಾಟವನ್ನ ಎರಡು ತಿಂಗಳು ಮುಂದೂಡಿದ್ದೇವೆ ಎಂದು ಸ್ವಾಮೀಜಿ ತಿಳಿಸಿದ್ದಾರೆ.
ಜೂನ್-27 ರಂದು ಸಿಎಂ ಮನೆ ಮುಂದೆ ಧರಣಿ ಹಮ್ಮಿಕೊಳ್ಳಲಾಗಿತ್ತು. ಆದರೆ, ಸಿಎಂ ಭರವಸೆ ಬಳಿಕ ಈ ಧರಣಿಯನ್ನ ಸದ್ಯಕ್ಕೆ ಕೈ ಬಿಡಲಾಗಿದೆ ಎಂದು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ವಿವರಿಸಿದ್ದಾರೆ.
PublicNext
22/06/2022 07:02 pm