ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಲಿಂಗಾಯತ ಪಂಚಮಸಾಲಿ 2ಎ ಮೀಸಲಾತಿ ಹೋರಾಟಕ್ಕೆ ಉಮೇಶ್‌ ಕತ್ತಿ ಬೆಂಬಲ

ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲೂಕಿನ ಅರ್ಜುನವಾಡ ಗ್ರಾಮದಲ್ಲಿ ನಡೆದ ಪಂಚಮಸಾಲಿ ಹೋರಾಟದ ಪಾದಯಾತ್ರೆಯಲ್ಲಿ ಭಾಗವಹಿಸಿದ ಸಚಿವರು ಪಂಚಮಸಾಲಿ ಹೋರಾಟಕ್ಕೆ ನನ್ನ ಬೆಂಬಲ ಇರುವುದಾಗಿ ಘೋಷಿಸಿದ್ದಾರೆ. ಉಮೇಶ್ ಕತ್ತಿ ಬಣಜಿಗ ಸಮುದಾಯಕ್ಕೆ ಸೇರಿದವರಾದರೂ ಪಂಚಮಸಾಲಿ 2ಎ ಮೀಸಲಾತಿ ಹೋರಾಟದಲ್ಲಿ ಭಾಗವಹಿಸಿದ್ದಕ್ಕೆ ಹೋರಾಟಗಾರರು ಸಂತಸ ವ್ಯಕ್ತಪಡಿಸಿದ್ದಾರೆ.

ಮೀಸಲಾತಿ ಹೋರಾಟವನ್ನು ಉದ್ದೇಶಿಸಿ ಮಾತನಾಡಿದ ಸಚಿವ ಉಮೇಶ್ ಕತ್ತಿ, ಪಂಚಮಸಾಲಿ ಸಮುದಾಯಕ್ಕೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಎಲ್ಲ ಲಿಂಗಾಯತ ಶಾಸಕರು ಒಂದಾಗಿ ಸಿಎಂ ಮೇಲೆ ಒತ್ತಡ ತರುತ್ತೇವೆ. ನೀವು ನಿಮ್ಮ ಹೋರಾಟ ಮುಂದುವರಿಸಿ, ಆದಷ್ಟು ಬೇಗ ನಿಮಗೆ ನ್ಯಾಯ ಕೊಡಿಸಿ ಎಲ್ಲರೂ ಸೇರಿಸಿ ವಿಜಯೋತ್ಸವ ಮಾಡೋಣ ಎಂದು ಭರವಸೆ ನೀಡಿದ್ದಾರೆ.

ಈ ಸಂಧರ್ಭದಲ್ಲಿ ಸಚಿವ ಉಮೇಶ ಕತ್ತಿ ಅವರ ಬೆಂಬಲಕ್ಕೆ ಪಂಚಮಸಾಲಿ ಹೋರಾಟಕ್ಕೆ ಇನ್ನೂ ಹೆಚ್ಚಿನ ಬಲ ಬಂದಿದೆ ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಜಯಮೃತ್ಯಂಜಯ ಸ್ವಾಮೀಜಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ತಾಲೂಕಾ ಅಧ್ಯಕ್ಷ ಗುಂಡು ಪಾಟೀಲ, ಪಂಚಮಸಾಲಿ ಮೀಸಲಾತಿ ಹೋರಾಟ ಸಮಿತಿಯ ಮುಖಂಡರಾದ ವಿನಯ ಪಾಟೀಲ, ರಾಜು ಮುನ್ನೋಳಿ, ಮಾಜಿ ಸಚಿವ ಶಶಿಕಾಂತ ನಾಯಿಕ, ಬಿಜೆಪಿ ಮುಖಂಡ ಗುರು ಕುಲಕರ್ಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Edited By :
PublicNext

PublicNext

04/09/2022 07:43 pm

Cinque Terre

42.67 K

Cinque Terre

1

ಸಂಬಂಧಿತ ಸುದ್ದಿ