ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಕಲ್ಲು ತೂರುವವರಿಗೆ ಜೀವಾವಧಿ ಶಿಕ್ಷೆ': ಎಂಪಿ ಬಿಜೆಪಿ ಸರ್ಕಾರದಿಂದ ಹೊಸ ಕಾನೂನು ಚಿಂತನೆ

ಭೋಪಾಲ್: ಕಲ್ಲು ತೂರುವವರಿಗೆ ಜೀವಾವಧಿ ಶಿಕ್ಷೆ ಎಂಬ ಹೊಸ ಕಾನೂನು ಜಾರಿಗೆ ತಲು ಮಧ್ಯಪ್ರದೇಶದ ಬಿಜೆಪಿ ಸರ್ಕಾರ ಮುಂದಾಗಿದೆ.

ಇಂದೋರ್‌ನಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್, ''ರಾಜ್ಯದಲ್ಲಿ ಕಲ್ಲು ತೂರಾಟ ಘಟನೆಗಳ ಕುರಿತು ಬಿಗಿ ನಿಯಂತ್ರಣ ಸಾಧಿಸಲು ಜೀವಾವಧಿ ಶಿಕ್ಷೆ ವಿಧಿಸುವ ಕಠಿಣ ಕಾನೂನು ರೂಪಿಸಲಾಗುವುದು. ಕಲ್ಲು ತೂರಾಟ ನಡೆಸುವವರ ವಿರುದ್ಧ ಬಲವಾದ ಕಾನೂನು ಜಾರಿಗೊಳಿಸುತ್ತಿದ್ದೇವೆ. ಉದ್ದೇಶಿತ ಕಾನೂನಿನಡಿ ಜೀವಾವಧಿ ಶಿಕ್ಷೆ ವಿಧಿಸಲಾಗುವುದು. ಇವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗುವುದಿಲ್ಲ ಎಂದು ಹೇಳಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಬಗ್ಗೆ ಜಾಗೃತಿ ಮೂಡಿಸಲು ವಿಶ್ವ ಹಿಂದೂ ಸೇರಿದಂತೆ ಹಲವು ಸಂಘಟನೆಗಳು ಉಜ್ಜಯಿನಿ, ಇಂದೋರ್ ಹಾಗೂ ಮಾಂಡ್‍ಸೌರ್‌ನಲ್ಲಿ ರ‍್ಯಾಲಿ ನಡೆಸಿದ್ದವು. ಈ ವೇಳೆ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, 24ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದವು. ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯ ಪ್ರದೇಶ ಪೊಲೀಸರು 46 ಜನರನ್ನು ಬಂಧಿಸಿದ್ದರು. ಈ ಘಟನೆ ನಡೆದ ಕೆಲವೇ ದಿನಗಳ ಬೆನ್ನಲ್ಲೇ ಸಿಎಂ ಶಿವರಾಜ್ ಸಿಂಗ್ ಅವರು ಈ ಹೇಳಿಕೆ ನೀಡಿದ್ದಾರೆ.

Edited By : Vijay Kumar
PublicNext

PublicNext

07/01/2021 04:53 pm

Cinque Terre

111.67 K

Cinque Terre

16

ಸಂಬಂಧಿತ ಸುದ್ದಿ