ಮೈಸೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಕೂಡಿ ಬಂದಿದೆ.
ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸಚಿವ ಸ್ಥಾನಕ್ಕಾಗಿ ಚಾತಕಪಕ್ಷಿಗಳಂತೆ ಕಾಯುತ್ತಿದ್ದವರ ಮೊಗದಲ್ಲೀಗ ಮಂದಹಾಸ ಮೂಡಿದೆ.
ಜ.13 ಅಥವಾ 14ರಂದು ಸಚಿವ ಸಂಪುಟ ವಿಸ್ತರಣೆ ಆಗಲಿದೆ. 13ರಂದು ಅಮಾವಾಸ್ಯೆ ಇದೆ. ಅಂದು ಸಂಜೆ 4 ಗಂಟೆ ಬಳಿಕ ಅಮಾವಾಸ್ಯೆ ಇರುವುದಿಲ್ಲ. ಇದೆಲ್ಲವನ್ನು ನೋಡಿಕೊಂಡೇ ತೀರ್ಮಾನ ಮಾಡಲಾಗಿದೆ ಎಂದು ಸುತ್ತೂರಿನಲ್ಲಿ ಸೋಮವಾರ ಬೆಳಗ್ಗೆ ಸಿಎಂ ಹೇಳಿದರು.
ಖಾಲಿಯಿರುವ 7 ಸ್ಥಾನಗಳನ್ನು ತುಂಬುವುದು ಖಚಿತ.
ಬುಧವಾರ ಇಲ್ಲವೇ ಗುರುವಾರ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಲಿದೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೂ ಆಹ್ವಾನಿಸಿದ್ದು, ಅವರ ಅನುಕೂಲತೆ ನೋಡಿಕೊಂಡು ದಿನಾಂಕ ಹಾಗೂ ಸಮಯ ನಿಗದಿ ಮಾಡಲಾಗುವುದು ಎಂದಿದ್ದಾರೆ.
PublicNext
11/01/2021 10:53 am