ಬೆಂಗಳೂರು: ಶೀಘ್ರವೇ ಬಿಬಿಎಂಪಿ ಚುನಾವಣೆ ನಡೆಸುವಂತೆ ರಾಜ್ಯ ಹೈಕೋರ್ಟ್ ಆದೇಶ ನೀಡಿತ್ತು. ಈ ಆದೇಶವನ್ನು ಸುಪ್ರೀಂಕೋರ್ಟ್ ಸಹ ಎತ್ತಿ ಹಿಡಿದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಆದರೆ ಇನ್ನೂ ಆರು ತಿಂಗಳವರೆಗೆ ಚುನಾವಣೆ ನಡೆಯುವುದಿಲ್ಲ ಎಂದು ಬಿಬಿಎಂಪಿ ಕಮಿಷನರ್ ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.
ನಗರದಲ್ಲಿ ಇಂದು ಮಾತನಾಡಿದ ಅವರು, ಬಿಬಿಎಂಪಿ ಕೌನ್ಸಿಲರ್ಗಳ ಸಂಖ್ಯೆಯನ್ನ 243ಕ್ಕೆ ಹೆಚ್ಚಳ ಮಾಡಿ ಸರ್ಕಾರದ ಅಧಿಕೃತ ಆದೇಶ ಹೊರಬಿದ್ದಿದೆ. ಆರು ತಿಂಗಳ ಒಳಗೆ ವಾರ್ಡ್ಗಳ ಪುನರ್ ವಿಂಗಡಣೆ ಮಾಡಲು, ಬಿಬಿಎಂಪಿ ಗಡಿ ರೇಖೆಯ ಹೊರಗೆ 1 ಕಿ.ಮೀ ಸೇರಿಸಿಕೊಳ್ಳಲು ಸೂಚನೆ ನೀಡಲಾಗಿದೆ. ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಕೆಲವು ಹಳ್ಳಿಗಳನ್ನು ಸೇರಿಸಬೇಕು ಅಂತ ಶಾಸಕರು ಪ್ರಸ್ತಾವನೆ ನೀಡಿದ್ದಾರೆ. ಹೀಗಾಗಿ ಚುನಾವಣೆ ವಿಳಂಬವಾಗುತ್ತದೆ ಎಂದು ತಿಳಿಸಿದ್ದಾರೆ.
PublicNext
30/01/2021 12:44 pm