ನವದೆಹಲಿ: ಈ ಬಾರಿ ಪೆಟ್ರೋಲ್ ಬೆಲೆ ವಿಷಯಕ್ಕಾಗಿ ಕೇಂದ್ರದ ಬಗ್ಗೆ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಸ್ವಪಕ್ಷೀಯ ಸರ್ಕಾರದ ವಿರುದ್ಧ ಮುಲಾಜಿಲ್ಲದೇ ಟೀಕೆ ಮಾಡುವ ಸುಬ್ರಹ್ಮಣಿಯನ್ ಸ್ವಾಮಿ ಈಗ ಮತ್ತೊಮ್ಮೆ ಕೇಂದ್ರದ ವಿರುದ್ಧ ಗರಂ ಆಗಿದ್ದಾರೆ.
ಕೇಂದ್ರ ಬಜೆಟ್-2021 ಮಂಡನೆಯಾದ ಬಳಿಕ ಪೆಟ್ರೋಲ್ ದರ ಏರಿಕೆ ಬಗ್ಗೆ ಸಂಸದ ಸುಬ್ರಹ್ಮಣಿಯನ್ ಸ್ವಾಮಿ
ಭಾರತ ಹಾಗೂ ನೆರೆ ರಾಷ್ಟ್ರಗಳಲ್ಲಿನ ಪೆಟ್ರೋಲ್ ಬೆಲೆಯನ್ನು ಹೋಲಿಕೆ ಮಾಡಿರುವ ಫೋಟೋ ಹಂಚಿಕೊಂಡಿರುವುದು ಮಹತ್ವ ಪಡೆದುಕೊಂಡಿದೆ.
ಪೆಟ್ರೋಲ್ ಬೆಲೆ ಏರಿಕೆ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಸ್ವಾಮಿ, ರಾಮನ ಭಾರತದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 93 ರೂಪಾಯಿಗಳಾಗಿದೆ. ಸೀತೆಯ ನೇಪಾಳದಲ್ಲಿ ಪ್ರತಿ ಲೀಟರ್ ಗೆ 53 ರೂಪಾಯಿಗಳಾಗಿದ್ದರೆ ರಾವಣನ ಲಂಕೆಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 51 ರೂಪಾಯಿಗಳು ಎಂದು ಬರೆದಿದ್ದು, ದೇಶದಲ್ಲಿ ಪೆಟ್ರೋಲ್ ಬೆಲೆ ಏರಿಕೆಯಾಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
PublicNext
02/02/2021 02:59 pm