ಬೆಂಗಳೂರು: ಇನ್ನೆರಡು ದಿನಗಳಲ್ಲಿ ಸಾರಿಗೆ ನೌಕರರ ಬಾಕಿ ಸಂಬಳ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾರಿಗೆ ನೌಕರರ ಬೇಡಿಕೆಗಳ ಹಿನ್ನೆಲೆಯಲ್ಲಿ ಸಮಿತಿ ರಚಿಸಲಾಗಿತ್ತು. ಆ ಸಮಿತಿ ನಾಲ್ಕೈದು ಸಭೆಗಳನ್ನು ನಡೆಸಿದೆ. ನೌಕರರು ಹತ್ತು ಬೇಡಿಕೆಗಳನ್ನು ಇಟ್ಟಿದ್ದು, ಒಂಬತ್ತಕ್ಕೆ ಒಪ್ಪಿಗೆ ಕೊಟ್ಟಿದ್ದೇವೆ. ಈಗಾಗಲೇ ಮೂರು ಬೇಡಿಕೆಗಳನ್ನ ಈಡೇರಿಸಿದ್ದೇವೆ ಎಂದು ತಿಳಿಸಿದರು.
ಇದೇ ವೇಳೆ ಬಸ್ ಪ್ರಯಾಣ ದರ ಹೆಚ್ಚಳ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಹೇಳಿದರು.
PublicNext
03/02/2021 07:32 am