ನವದೆಹಲಿ: ಹಣದುಬ್ಬರ ನಿಯಂತ್ರಣಕ್ಕೆ ಇಂಧನದ ಮೇಲಿನ ತೆರಿಗೆಯನ್ನು ಕಡಿತ ಮಾಡಬೇಕು ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದೆ.
ದುಬಾರಿ ಇಂಧನ ದರಗಳಿಂದಾಗಿ ಕಂಗೆಟ್ಟಿರುವ ಗ್ರಾಹಕರ ಬೆನ್ನಿಗೆ ನಿಂತಿರುವ ಆರ್‌ಬಿಐ, ಕೂಡಲೇ ದುಬಾರಿ ಇಂಧನ ತೆರಿಗೆಗಳನ್ನು ಕಡಿತ ಮಾಡಬೇಕು. ಇದರಿಂದ ಹಣದುಬ್ಬರ ನಿಯಂತ್ರಣವಾಗುತ್ತದೆ ಮತ್ತು ಗ್ರಾಹಕರಿಗೆ ಸ್ವಲ್ಪ ಪರಿಹಾರ ನೀಡಿದಂತಾಗುತ್ತದೆ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸಲಹೆ ನೀಡಿದೆ.
ಇದೇ ವಿಚಾರವಾಗಿ ಶುಕ್ರವಾರ ಪ್ರತಿಕ್ರಿಯೆ ನೀಡಿದ್ದ ಹಣಕಾಸು ನೀತಿ ಸಮಿತಿ (ಎಂಪಿಸಿ), ''ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಐತಿಹಾಸಿಕ ಗರಿಷ್ಠ ಮಟ್ಟವನ್ನು ತಲುಪಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ತೆರಿಗೆಯನ್ನು ಕಡಿತ ಮಾಡುವುದರಿಂದ ವೆಚ್ಚ- ಹಣದುಬ್ಬರದ ಒತ್ತಡಗಳು ಕಡಿಮೆಯಾಗಬಹುದು' ಎಂದು ತಿಳಿಸಿತ್ತು.
PublicNext
06/02/2021 03:22 pm