ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ''ಉಪಚುನಾವಣೆ ಯಾವಾಗ ಘೋಷಣೆ ಆಗುತ್ತೆ ಅಂತ ನಾವು ಹೇಳಕ್ಕಾಗಲ್ಲ''

ಬೆಳಗಾವಿ: ಬಸವಕಲ್ಯಾಣ, ಮಸ್ಕಿ ಹಾಗೂ ಬೆಳಗಾವಿ ಕ್ಷೇತ್ರಗಳಿಗೆ ಉಪಚುನಾವಣೆ ಯಾವತ್ತು ಘೋಷಣೆ ಆಗುತ್ತದೆ ಅಂತ ನಾವು ಹೇಳಕ್ಕೆ ಆಗುವುದಿಲ್ಲ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಡಾ.ಸಂಜೀವಕುಮಾರ್ ಹೇಳಿದ್ದಾರೆ.

ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 38,57,982 ಮತದಾರರು ಇದ್ದಾರೆ. 19,52,160 ಪುರುಷ, 19,00,822 ಮಹಿಳಾ ಮತದಾರರು ಇದ್ದಾರೆ. 19,836 ಸೇವಾ ಮತದಾರರು ಇದರಲ್ಲಿ 354 ಮಹಿಳಾ ಮತದಾರರಿದ್ದಾರೆ. ಮತದಾರರ ಪಟ್ಟಿಯಲ್ಲಿ ಹೊಸದಾಗಿ ಸೇರ್ಪಡೆಯಾದವರ ಹೆಸರು ಇದೆಯಾ ಅಂತ ಪರಿಶೀಲನೆ ಮಾಡಿಕೊಳ್ಳಲು ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಉಪಚುನಾವಣೆ ಘೋಷಣೆ ಆದ ಬಳಿಕ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಸಾಧ್ಯವಿಲ್ಲ. ಶಿರಾ, ಆರ್.ಆರ್.ನಗರ ಉಪಚುನಾವಣೆಯಲ್ಲಿ ಕೋವಿಡ್ ಹಿನ್ನೆಲೆ ವಿಶೇಷ ಸೌಲಭ್ಯ ನೀಡಲಾಗಿತ್ತು. ಆ ಸೌಲಭ್ಯ ಮುಂದೆ ನಡೆಯಲಿರುವ ಉಪಚುನಾವಣೆಯಲ್ಲಿ ಮುಂದುವರಿಕೆ ಮಾಡಲಾಗುತ್ತದೆ ಎಂದರು.

ಬೆಳಗಾವಿ ಜಿಲ್ಲೆಯಲ್ಲಿ ಇರುವ ದಿವ್ಯಾಂಗರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ನೋಂದಾಯಿಸಬೇಕು. ದಿವ್ಯಾಂಗ ಮತದಾರರು, 80 ವರ್ಷ ಮೇಲ್ಪಟ್ಟವರು, ಕೋವಿಡ್ ಸೋಂಕಿತರಿಗೆ ಪೋಸ್ಟಲ್ ಬ್ಯಾಲೆಟ್ ಸೌಲಭ್ಯ ಕಲ್ಪಿಸಲಾಗುತ್ತದೆ. ಈ ಸೌಲಭ್ಯ ಮುಂದೆ ನಡೆಯಲಿರುವ ಉಪಚುನಾವಣೆಯಲ್ಲೂ ಮುಂದುವರಿಯುತ್ತೆ. ಚುನಾವಣಾ ಅಕ್ರಮ ತಡೆಯದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಉಪಚುನಾವಣೆಗೆ ಎಲ್ಲಾ ರೀತಿಯ ಸಿದ್ಧತೆಯನ್ನ ಈಗಾಗಲೇ ಮಾಡಿಕೊಳ್ಳಲಾಗಿದೆ. ಒಂದು ಬಾರಿ ರಾಜಕೀಯ ಪಕ್ಷದ ಮುಖಂಡರನ್ನ ಇವಿಎಂ ಟೆಸ್ಟಿಂಗ್ ಕೂಡ ಮಾಡಿದ್ದೇವೆ ಎಂದು ಹೇಳಿದರು.

Edited By : Manjunath H D
PublicNext

PublicNext

09/02/2021 08:53 pm

Cinque Terre

89.36 K

Cinque Terre

1

ಸಂಬಂಧಿತ ಸುದ್ದಿ