ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕನ್ನಡ ಭಾಷೆಗೆ ಸ್ವಾಯತ್ತ ಸ್ಥಾನಮಾನ ನೀಡಬೇಕು: ಎಲ್. ಹನುಮಂತಯ್ಯ

ನವದೆಹಲಿ: ಶಾಸ್ತ್ರೀಯ ಸ್ಥಾನಮಾನ ಪಡೆದ ಕನ್ನಡ ಭಾಷೆಗೆ ಸ್ವಾಯತ್ತ ಸ್ಥಾನಮಾನವನ್ನು ನೀಡಬೇಕೆಂದು ರಾಜ್ಯಸಭಾ ಸದಸ್ಯರಾದ ಡಾ.ಎಲ್ ಹನುಮಂತಯ್ಯ ರಾಜ್ಯಸಭೆಯಲ್ಲಿ ಇಂದು ಶೂನ್ಯ ವೇಳೆಯಲ್ಲಿ ಪ್ರಸ್ತಾಪ ಮಾಡಿದರು.

2008 ರಲ್ಲಿಯೇ ಶಾಸ್ತ್ರೀಯ ಸ್ಥಾನಮಾನ ಪಡೆದಿರುವ ಕನ್ನಡ ಶಾಸ್ತ್ರೀಯ ಭಾಷಾ ಸಂಸ್ಥೆಗೆ ಸ್ವಾಯತ್ತ ಸ್ಥಾನಮಾನವನ್ನು ನೀಡಬೇಕೆಂದು ಕರ್ನಾಟಕ ಸರ್ಕಾರ ಸೇರಿದಂತೆ, ಕನ್ನಡ ಭಾಷಾ ಸಾಹಿತಿಗಳು ಮತ್ತು ಕನ್ನಡಪರ ಹೋರಾಟಗಾರರು ಅನೇಕ ವರ್ಷಗಳಿಂದ ಕೇಂದ್ರ ಸರ್ಕಾರಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಮುಂಚೆ ಕೇಂದ್ರದ ಹಲವು ಸಚಿವರಿಗೆ ಈ ಬಗ್ಗೆ ಮನವಿ ಮಾಡಲಾಗಿತ್ತು. ತಮಿಳು ಭಾಷೆಗೆ ಶಾಸ್ತ್ರೀಯ ಸ್ಥಾನಮಾನದ ಜೊತೆಗೆ ಸ್ವಾಯತ್ತ ಸ್ಥಾನಮಾನವನ್ನೂ ನೀಡಲಾಗಿದೆ. ಆದರೆ ಕನ್ನಡ ಭಾಷೆಗೆ ಯಾಕೆ ಇನ್ನೂ ಸ್ವಾಯತ್ತ ಸ್ಥಾನಮಾನ ನೀಡಲಾಗಿಲ್ಲ? ಎಂದು ಎಲ್. ಹನುಮಂತಯ್ಯ ಪ್ರಶ್ನಿಸಿದ್ದಾರೆ.

Edited By : Nagaraj Tulugeri
PublicNext

PublicNext

12/02/2021 08:20 am

Cinque Terre

83.23 K

Cinque Terre

5

ಸಂಬಂಧಿತ ಸುದ್ದಿ