ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರಧಾನಿ ಸಲಹೆಗಾರ ಅಮರ್ ಜಿತ್ ಸಿನ್ಹಾ ರಾಜೀನಾಮೆ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಾರ್ಯಾಲಯ(ಪಿಎಂಒ)ದಲ್ಲಿ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಮತ್ತೊಬ್ಬ ನಿವೃತ್ತ ಐಎಎಸ್ ಅಧಿಕಾರಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಪಿಎಂಒ ದಲ್ಲಿ ಸಾಮಾಜಿಕ ಸಂಬಂಧ ವ್ಯವಹಾರಗಳ ನೋಡಿಕೊಳ್ಳುತ್ತಿದ್ದ ನಿವೃತ್ತ ಐಎಎಸ್ ಅಧಿಕಾರಿ ಅಮರ್‌ ಜಿತ್‌ ಸಿನ್ಹಾ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

ಬಿಹಾರ ಕೇಡರ್‌ ನ ಅಮರ್‌ ಜಿತ್‌ ಸಿನ್ಹಾ 1983ರ ತಂಡದ ಐಎಎಸ್ ಅಧಿಕಾರಿ. 2019ರಲ್ಲಿ ಗ್ರಾಮೀಣಾಭಿವೃದ್ಧಿ ಕಾರ್ಯದರ್ಶಿಯಾಗಿ ನಿವೃತ್ತಿಗೊಂಡ ನಂತರ 2020ರ ಫೆಬ್ರವರಿಯಲ್ಲಿ ಎರಡು ವರ್ಷಗಳ ಕಾಲ ಪ್ರಧಾನಿ ಕಾರ್ಯಾಲಯದ ಸಲಹೆಗಾರರಾಗಿ ನೇಮಕಗೊಂಡಿದ್ದರು. ಈಗ ಅವರು ದಿಢೀರ್ ರಾಜೀನಾಮೆ ನೀಡಿದ್ದು ಚರ್ಚೆಗೆ ಗ್ರಾಸವಾಗಿದೆ.

Edited By : Nagaraj Tulugeri
PublicNext

PublicNext

03/08/2021 08:10 am

Cinque Terre

55.37 K

Cinque Terre

1