ಬೆಂಗಳೂರು: ಕಳೆದ ತಿಂಗಳು ರಾಜ್ಯದ ಹಲವೆಡೆ ಸುರಿದ ಅತಿವೃಷ್ಟಿಯಿಂದ ಪ್ರವಾಹ ಉಂಟಾಗಿತ್ತು. ಆಸ್ತಿ-ಪಾಸ್ತಿ ಹಾನಿಯಾಗಿ ಜನ ಅಂತಂತ್ರ ಸ್ಥಿತಿಗೆ ತಲುಪಿದ್ದಾರೆ. ಪ್ರವಾಹದಲ್ಲಿ ಸಂತ್ರಸ್ತರಾದವರಿಗೆ ರಾಜ್ಯ ಸರ್ಕಾರ ಪರಿಹಾರ ಮೊತ್ತ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ.
ಕೇಂದ್ರ ಸರ್ಕಾರದ ಎನ್‍ಡಿಆರ್‍ಎಫ್/ಎಸ್‍ಡಿಆರ್‍ಎಫ್ ಮಾರ್ಗಸೂಚಿ ಅನ್ವಯ ನಿಗದಿ ಪಡಿಸಿದ ಮೊತ್ತಕ್ಕಿಂತ ಹೆಚ್ಚುವರಿ ಪರಿಹಾರವನ್ನು ಸೇರಿಸಿ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ. ಪ್ರವಾಹದ ನೀರು ಮನೆಗೆ ನುಗ್ಗಿ ಆಹಾರ, ಗೃಹಪಯೋಗಿ ವಸ್ತುಗಳಿಗೆ ಹಾನಿ ಉಂಟಾಗಿರುವವರಿಗೆ ಪರಿಹಾರ ಮೊತ್ತವನ್ನು 3,800 ರೂಪಾಯಿಯಿಂದ 10 ಸಾವಿರ ರೂಪಾಯಿಗೆ ಹೆಚ್ಚಿಸಲಾಗಿದೆ.
PublicNext
14/08/2021 07:30 am