ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಮಾಧ್ಯಮ ಸಂಯೋಜಕರನ್ನಾಗಿ, ಗುರುಲಿಂಗಸ್ವಾಮಿ ಹೆಚ್ ಬಿ ಅವರನ್ನು ನೇಮಕ ಮಾಡಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಹಿರಿಯ ಪತ್ರಕರ್ತರಾದ ಗುರುಲಿಂಗ ಸ್ವಾಮಿ ಅವರು ಅನೇಕ ಮುಂಚೂಣಿ ಮಾಧ್ಯಮ ಸಂಸ್ಥೆಯಲ್ಲಿ ಕೆಲಸ ಮಾಡಿದ್ದಾರೆ. ವರದಿಗಾರರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಅವರನ್ನು ಸಿಎಂ ಮಾಧ್ಯಮ ಸಂಯೋಜಕರಾಗಿ ಹುದ್ದೆಗೆ ನೇಮಕ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಹಂತೇಶ್ ಅಧಿಸೂಚನೆ ಹೊರಡಿಸಿದ್ದಾರೆ. ಗುರುಲಿಂಗಸ್ವಾಮಿ, ಹೆಚ್.ಬಿ ಅವರನ್ನು ದಿನಾಂಕ 02-08-2021ರಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿಯವರ ಪದಾವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ ಗುತ್ತಿಗೆ ಆಧಾರದ ಮೇಲೆ ಮುಖ್ಯಮಂತ್ರಿಯವರ ಮಾಧ್ಯಮ ಸಂಯೋಜಕರನ್ನಾಗಿ ನೇಮಿಸಲಾಗಿದೆ.
PublicNext
20/08/2021 02:06 pm