ಬೆಂಗಳೂರು: ಕಂದಾಯ ನಿವೇಶನಗಳನ್ನು ನೋಂದಣಿ ಮಾಡಿದ್ದರೆನ್ನಲಾದ ಐವರು ಉಪ ನೋಂದಣಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ವಿಧಾನ ಪರಿಷತ್‌ನಲ್ಲಿ ಬುಧವಾರ ಕಂದಾಯ ನಿವೇಶನಗಳ ನೋಂದಣಿಯಲ್ಲಿನ ಸಮಸ್ಯೆಗಳ ಕುರಿತು ಜೆಡಿಎಸ್‌ನ ಕಾಂತರಾಜ್ ಪ್ರಶ್ನೆಗೆ ಉತ್ತರಿಸಿದ ಅವರು, ‘ಶಿವರಾಮ ಕಾರಂತ ಬಡಾವಣೆಯಲ್ಲಿ ಕಂದಾಯ ನಿವೇಶನಗಳ ನೋಂದಣಿ ಮಾಡಿದ ಅಧಿಕಾರಿಗಳನ್ನು ಪತ್ತೆಮಾಡಿ, ಅವರ ವಿರುದ್ಧ ಕ್ರಮ ಜರುಗಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿತ್ತು. ಐವರು ಉಪ ನೋಂದಣಿ ಅಧಿಕಾರಿಗಳನ್ನು ಇತ್ತೀಚೆಗೆ ಅಮಾನತು ಮಾಡಿದ್ದು, ನ್ಯಾಯಾಲಯಕ್ಕೆ ಈ ಕುರಿತು ಪ್ರಮಾಣಪತ್ರವನ್ನೂ ಸಲ್ಲಿಸಲಾಗಿದೆ’ ಎಂದಿದ್ದಾರೆ.
PublicNext
16/09/2021 11:19 am