ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇತ್ತೀಚೆಗೆ ಅತಿ ಹೆಚ್ಚು ವಾಯುಮಾಲಿನ್ಯ ವರದಿಯಾಗಿತ್ತು. ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ದೆಹಲಿ ಸರ್ಕಾರ ನೂತನ ಕ್ರಮಕ್ಕೆ ಮುಂದಾಗಿದೆ. ಪಟಾಕಿ ಮಾರಾಟ ಮತ್ತು ಸಿಡಿಸುವುದನ್ನು 2022ರ ಜನವರಿ 1ರವರೆಗೆ ನಿಷೇಧಿಸಿ ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ ಆದೇಶಿಸಿದೆ.
ಎಲ್ಲಾ ರೀತಿಯ ಪಟಾಕಿಗಳನ್ನು ಈ ಅವಧಿಯಲ್ಲಿ ನಿಷೇಧಿಸಲಾಗಿದ್ದು, ವಾಯುಮಾಲಿನ್ಯ ತಡೆಗಟ್ಟುವ ಉದ್ದೇಶದಿಂದ ಈ ನಿರ್ಣಯ ಕೈಗೊಳ್ಳಲಾಗಿದೆ. ಕೆಲವೇ ದಿನಗಳಲ್ಲಿ ಸಾಲುಸಾಲು ಹಬ್ಬಗಳು ಬರಲಿದ್ದು ಹಬ್ಬಗಳ ಆಚರಣೆಯಲ್ಲಿ ಪಟಾಕಿ ಸಿಡಿಸುವುದು ವಾಯುಮಾಲಿನ್ಯಕ್ಕೆ ಕಾರಣವಾಗಲಿದೆ. ಹೀಗಾಗಿ ಪಟಾಕಿ ಬಳಕೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ ಎಂದು ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ ತಿಳಿಸಿದೆ
PublicNext
29/09/2021 08:31 am