ಬೆಂಗಳೂರು: ರಾಜ್ಯದಲ್ಲಿ ಮತಾಂತರ ಪ್ರಕರಣಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ಚರ್ಚ್ ಹಾಗೂ ಕ್ರೈಸ್ತ ಮಿಷನರಿಗಳ ಸಮೀಕ್ಷೆ ನಡೆಸಲು ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರದ ಕಲ್ಯಾಣ ಸಮಿತಿ ಸೂಚಿಸಿದೆ.
ಅಧಿಕೃತ, ಅನಧಿಕೃತ ಚರ್ಚ್‌ಗಳ ಹಾಗೂ ಆ ಚರ್ಚ್‌ಗಳ ಪಾದ್ರಿಗಳು, ಇತರೆ ಸಿಬ್ಬಂದಿ ಮಾಹಿತಿ ಸಂಗ್ರಹಿಸುವಂತೆಯೂ ನಿರ್ದೇಶಿಸಲಾಗಿದೆ. ಜೊತೆಗೆ ಬಲವಂತದ ಮತಾಂತರ ಸಂಬಂಧ ಪ್ರಕರಣ ದಾಖಲಾಗಿದ್ದರೆ ಆ ಬಗ್ಗೆಯೂ ಮಾಹಿತಿ ನೀಡುವಂತೆಯೂ ತಿಳಿಸಲಾಗಿದೆ.
ಕೈಸ್ತ ಮಿಷನರಿಗಳಿಗೆ ಸರ್ಕಾರದಿಂದ ಸಿಗುತ್ತಿರುವ ಸೌಲಭ್ಯದ ಬಗ್ಗೆ ಮಾಹಿತಿ ನೀಡುವಂತೆ ತಿಳಿಸಲಾಗಿದೆ. ಕಾಂಗ್ರೆಸ್ ಶಾಸಕ ಪುಟ್ಟರಂಗಶೆಟ್ಟಿ ಅಧ್ಯಕ್ಷರಾಗಿರುವ ಸದನ ಸಮಿತಿ ಈ ಸೂಚನೆ ನೀಡಿದೆ. ಈ ಸದನ ಸಮಿತಿಯಲ್ಲಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್, ಜೆಡಿಎಸ್ ಎಂಎಲ್‍ಸಿ ಬಿ ಎಂ ಫಾರೂಕ್, ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಮತ್ತು ಬಂಟ್ವಾಳ ಬಿಜೆಪಿ ಶಾಸಕ ರಾಜೇಶ್ ನಾಯ್ಕ್ ಇದ್ದಾರೆ.
PublicNext
16/10/2021 12:56 pm