ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ದೇಶವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಭಾಷಣದುದ್ದಕ್ಕೂ ಅವರು, ಭಾರತವು ಗುರುವಾರ 100 ಕೋಟಿ ಕೋವಿಡ್-19 ಲಸಿಕೆ ಡೋಸ್‌ಗಳ ದಾಖಲೆಯ ಹಂತವನ್ನು ದಾಟಿದ ಬಗ್ಗೆ ಅವರು ಮಾತನಾಡಿದರು. ಆದರೆ ಇಂಧನ, ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ ಒಂದೇ ಒಂದು ಮಾತನಾಡದೆ ಇರುವುದು ಜನಸಾಮಾನ್ಯರ ಬೇಸರಕ್ಕೆ ಕಾರಣವಾಗಿದೆ.
ಅಷ್ಟೇ ಅಲ್ಲದೆ ಪ್ರಧಾನಿ ಮೋದಿ ಅವರ ಭಾಷಣದ ನೇರ ಮಾಡಿದ ಮಾಡಿದ ಪಿಎಂಓ ಇಂಡಿಯಾ ಯೂಟ್ಯೂಬ್ ಚಾನೆಲ್‌ನಲ್ಲಿ ಕಮೆಂಟ್ ಮಾಡುವ ಅವಕಾಶವೇ ಇರಲಿಲ್ಲ. ಇದರಿಂದಾಗಿ ಕೆಲ ನೆಟ್ಟಿಗರು ಟ್ವಿಟ್ವರ್, ಫೇಸ್‌ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹೊರ ಹಾಕಿದ್ದಾರೆ.
PublicNext
22/10/2021 10:59 am