ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ ಜನಶಕ್ತಿ ಎದುರು ಮಣಿಯಲೇಬೇಕು'

ಬೆಂಗಳೂರು: ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇ ಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ವಿವಾದಿತ ಮೂರು ಕೃಷಿ ಕಾಯಿದೆಗಳನ್ನು ವಾಪಸ್ ತೆಗೆದುಕೊಳ್ಳುವುದಾಗಿ ಇಂದು ಭರವಸೆ ನೀಡಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣಗಳಾದ ಟ್ವಿಟ್ಟರ್, ಫೇಸ್‌ಬುಕ್‌ನಲ್ಲಿ ಸಿದ್ದರಾಮಯ್ಯ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಸಿದ್ದು ಫೇಸ್‌ಬುಕ್‌ ಪೋಸ್ಟ್‌ನಲ್ಲಿ ಏನಿದೆ?:

ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರ ದೇಶದ ಮಣ್ಣಿನ ಮಕ್ಕಳ‌ ಅಭೂತಪೂರ್ವ ಹೋರಾಟಕ್ಕೆ‌ ಸಿಕ್ಕ ಗೆಲುವಾಗಿದೆ. ರೈತ ಹೋರಾಟಗಾರರಿಗೆ ಅಭಿನಂದನೆಗಳು. ಕೃಷಿ‌ ಕಾಯ್ದೆಯನ್ನು ರದ್ದುಗೊಳಿಸಿದರಷ್ಟೇ ಸಾಲದು ಈ ಕರಾಳ ಕಾಯ್ದೆ ರದ್ದತಿಗಾಗಿ ನಡೆದ ಹೋರಾಟದಲ್ಲಿ ಹುತಾತ್ಮರಾದ ರೈತ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಲಾ 25 ಲಕ್ಷ ರೂಪಾಯಿ‌ ಪರಿಹಾರ ಕೊಡಬೇಕೆಂದು ಒತ್ತಾಯಿಸುತ್ತೇನೆ.

ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇ ಬೇಕು. ಇದುವೇ ಪ್ರಜಾಪ್ರಭುತ್ವದ ಸೊಗಸು. ಇದುವೇ ರೈತರ ಸ್ವಾತಂತ್ರ್ಯೋತ್ಸವ, ಕೃಷಿ ಕಾಯ್ದೆ‌ಯಷ್ಟೇ ಅಲ್ಲ, ಕೇಂದ್ರ ಬಿಜೆಪಿ‌ ಸರ್ಕಾರದ ಪ್ರತಿಯೊಂದು ನೀತಿ ಮತ್ತು ಕಾರ್ಯಕ್ರಮಗಳು ರೈತ ವಿರೋಧಿಯಾದುದು.

ಇದು ವಿರಮಿಸುವ ಕಾಲ ಅಲ್ಲ,‌ ರೈತ ವಿರೋಧಿ ಬಿಜೆಪಿ ವಿರುದ್ಧದ ಹೋರಾಟ ಮುಂದುವರಿಯಲಿದೆ. ರೈತರ ಹೋರಾಟಕ್ಕೆ ಸಿಕ್ಕ ಗೆಲುವಿನ‌‌ ಸ್ಪೂರ್ತಿ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ವಿರುದ್ಧ ದ ಜನ ಹೋರಾಟಕ್ಕೆ ನಾಂದಿಯಾಗಲಿದೆ. ಪಟ್ರೋಲ್-ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧದ ಹೋರಾಟಕ್ಕೆ ದೇಶದ ಜನ ಅಣಿಯಾಗಿದ್ದಾರೆ.

Edited By : Vijay Kumar
PublicNext

PublicNext

19/11/2021 01:55 pm

Cinque Terre

36.22 K

Cinque Terre

36

ಸಂಬಂಧಿತ ಸುದ್ದಿ