ನವದೆಹಲಿ: ವಿಪಕ್ಷಗಳ ತೀವ್ರ ಕೋಲಾಹಲ, ಗದ್ದಲದ ನಡುವೆಯೇ ಸಂಸತ್ತಿನ ಚಳಿಗಾಲದ ಅಧಿವೇಶನ ಇಂದು ಆರಂಭವಾದೆ.
ಇನ್ನು ಇದೇ ಗದ್ದಲದ ಮಧ್ಯೆಯೇ ಮೂರು ಕೃಷಿ ಕಾಯ್ದೆಯನ್ನು ರದ್ದು ಮಾಡುವ ಮಸೂದೆ ಲೋಕಸಭೆಯಲ್ಲಿ ಅಂಗೀಕಾರಗೊಂಡಿದೆ. ಇದಾದ ಬಳಿಕವೂ ಪ್ರತಿಪಕ್ಷಗಳ ತೀವ್ರ ಗದ್ದಲ ಹಿನ್ನೆಲೆಯಲ್ಲಿ ಕಲಾಪವನ್ನು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಮುಂದೂಡಲಾಗಿದೆ.
ಇಂದು ಅಧಿವೇಶನ ಆರಂಭವಾಗುತ್ತಿದ್ದಂತೆ ವಿರೋಧ ಪಕ್ಷಗಳು ತೀವ್ರ ಗದ್ದಲವನ್ನುಂಟು ಮಾಡಿದ ಕಾರಣ ಮೂರು ಬಾರಿ ಕಲಾಪವನ್ನು ಮುಂದೂಡಲಾಗಿತ್ತು.
PublicNext
29/11/2021 03:37 pm