ನವದೆಹಲಿ: 2022- 23ನೇ ಸಾಲಿನ ಬಜೆಟ್‌ಗೆ ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಹೂಡಿಕೆದಾರರಿಂದ ಸಲಹೆ ಪಡೆದುಕೊಂಡಿದ್ದಾರೆ. ಅದಕ್ಕಾಗಿ ಅವರು ಶುಕ್ರವಾರ(ಡಿಸೆಂಬರ್ 17) ಹೂಡಿಕೆದಾರರೊಂದಿಗೆ ಸಭೆ ನಡೆಸಿದರು.
ಈ ಸಭೆಯಲ್ಲಿ ಭಾರತದಲ್ಲಿ ವ್ಯಾಪಾರವನ್ನು ಇನ್ನಷ್ಟು ಸುಲಭಗೊಳಿಸಲು, ಹೆಚ್ಚಿನ ಬಂಡವಾಳವನ್ನು ಆಕರ್ಷಿಸಲು ಮತ್ತು ಸುಧಾರಣಾ ಪ್ರಕ್ರಿಯೆಯನ್ನು ಮತ್ತಷ್ಟು ಹೆಚ್ಚಿಸಲು ಸಲಹೆಗಳನ್ನು ಕೇಳುವ ಬಗ್ಗೆ ಸಭೆಯಲ್ಲಿ ಚರ್ಚೆಗಳು ನಡೆದಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಮುಂದಿನ ಬಜೆಟ್‌ಗೆ ಮುಂಚಿತವಾಗಿ ಸಲಹೆಗಳನ್ನು ಸಂಗ್ರಹಿಸಲು ಉದ್ಯಮದ ಪ್ರಮುಖರೊಂದಿಗೆ ಪ್ರಧಾನಿ ಹೇಗೆ ವೈಯಕ್ತಿಕವಾಗಿ ಸಂವಹನ ನಡೆಸುತ್ತಿದ್ದಾರೆ ಎಂಬುದನ್ನು ಸಭೆಯು ವಿವರಿಸುತ್ತದೆ ಎಂದು ಹೇಳಲಾಗಿದೆ. ಏಪ್ರಿಲ್ 1, 2022ರಂದು ಪ್ರಾರಂಭವಾಗುವ ಮುಂದಿನ ಹಣಕಾಸು ವರ್ಷದ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1ರಂದು ಮಂಡಿಸಲಿದ್ದಾರೆ.
PublicNext
18/12/2021 10:25 pm