ಬೆಳಗಾವಿ: ವಿಪಕ್ಷಗಳ ವಿರೋಧದ ಮಧ್ಯೆಯೂ ಇಂದು ವಿಧಾನಸಭೆ ಕಲಾಪದಲ್ಲಿ ಮತಾಂತರ ನಿಷೇಧ ವಿಧೇಯಕವನ್ನು ಮಂಡಿಸಲಾಯಿತು. ಗೃಹ ಸಚಿವ ಅರಗ ಜ್ಞಾನೇಂದ್ರ ವಿಧೇಯಕ ಮಂಡಿಸುತ್ತಿದ್ದಂತೆ ಕಾಂಗ್ರೆಸ್ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಜನ ವಿರೋಧಿ ಕಾಯಿದೆ ತಂದು ಅದನ್ನು ಪಾಸ್ ಮಾಡೋದು ಸರಿಯಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದರು.
ಇಂತಹ ಕೆಟ್ಟ ಸರ್ಕಾರ ಕರ್ನಾಟಕದ ಇತಿಹಾಸದಲ್ಲೇ ಇಲ್ಲ ಎಂದು ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು. ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಿಲ್ ಪ್ರತಿ ಹರಿದು ಆಕ್ರೋಶ ವ್ಯಕ್ತಪಡಿಸಿದರು. ಇನ್ನು ಡಿಕೆಶಿ ನಡೆಗೆಯನ್ನು ಸ್ಪೀಕರ್ ಖಂಡಿಸಿದರು. ಬಿಲ್ ಮಂಡನೆ ಬಗ್ಗೆ ನಿಮ್ಮ ವಿಪ್ ಗೆ ಹೇಳಿ ಕಳುಹಿಸಿದ್ದೇನೆ. ಬಿಲ್ ಚೆನ್ನಾಗಿ ನೋಡ್ಕೊಂಡು, ನಾಳೆ ಚರ್ಚೆಗೆ ಬನ್ನಿ ಎಂದು ಸೂಚಿಸಿದರು.
ನಂತರ ಬಿಜೆಪಿ-ಕಾಂಗ್ರೆಸ್ ನಾಯಕರ ಮಧ್ಯೆ ವಾಗ್ವಾದ ಹೆಚ್ಚಾದ ಪರಿಣಾಮ ಸರ್ಕಾರದ ನಿರ್ಧಾರ ಖಂಡಿಸಿ ಕಾಂಗ್ರೆಸ್ ಸಭಾತ್ಯಾಗ ಮಾಡಿತು.
PublicNext
21/12/2021 06:02 pm