ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಫೆ.1ಕ್ಕೆ ಬಹು ನಿರೀಕ್ಷಿತ ಕೇಂದ್ರ ಬಜೆಟ್ ಮಂಡನೆ

ನವದೆಹಲಿ: ಜನವರಿ 31ರಿಂದ ಕೇಂದ್ರದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಏಪ್ರಿಲ್ 8ಕ್ಕೆ ಮುಕ್ತಾಯಗೊಳ್ಳಲಿದೆ. ಕೋವಿಡ್ ಮೂರನೇ ಅಲೆ, ಆರ್ಥಿಕ ಹಿಂಜರಿತದ ಜೊತೆಗೆ ಸಾಲು ಸಾಲು ಚುನಾವಣೆ ಎದುರಾಗುತ್ತಿರುವ ಹೊತ್ತಿನಲ್ಲೇ ಕೇಂದ್ರ ಸರ್ಕಾರ ಬಜೆಟ್ ಸಿದ್ಧತೆ ಆರಂಭಿಸಿದ್ದು, ಫೆಬ್ರವರಿ 1ರಂದು ನರೇಂದ್ರ ಮೋದಿ ಸರ್ಕಾರದ ಬಹು ನಿರೀಕ್ಷಿತ ಬಜೆಟ್ ಮಂಡನೆಯಾಗುವ ಸಾಧ್ಯತೆ ಇದೆ.

ರಾಷ್ಟ್ರಪತಿಗಳು ಜನವರಿ 31 ರಂದು ಬೆಳಿಗ್ಗೆ 11 ಗಂಟೆಗೆ ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1ರಂದು 2022-23 ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ.

Edited By : Vijay Kumar
PublicNext

PublicNext

14/01/2022 08:37 pm

Cinque Terre

61.44 K

Cinque Terre

5

ಸಂಬಂಧಿತ ಸುದ್ದಿ