ಬೆಂಗಳೂರು: ರಾಜ್ಯದಲ್ಲಿ ಸದ್ಯ ಜಾರಿಯಲ್ಲಿದ್ದ ವಾರಾಂತ್ಯದ ಕರ್ಫ್ಯೂ ರದ್ದುಗೊಳಿಸಲಾಗಿದೆ. ತಜ್ಞರು, ಅಧಿಕಾರಿಗಳು, ಸಚಿವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಸಿಎಂ ನೇತೃತ್ವದ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಂದು ವೇಳೆ ಆಸ್ಪತ್ರೆಗೆ ದಾಖಲಾಗುವ ಸೋಂಕಿತರ ಸಂಖ್ಯೆ ಹೆಚ್ಚಳವಾದರೆ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗುವುದು. ಉಳಿದಂತೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ವಾರದ ಏಳು ದಿನವೂ ರಾತ್ರಿ 10ರಿಂದ ಬೆಳಿಗ್ಗೆ 5ರವರೆಗೆ ಜಾರಿಯಲ್ಲಿರುತ್ತದೆ ಹಾಗೂ ಈಗಾಗಲೇ ಜಾರಿಯಲ್ಲಿರುವ ನಿಯಮಗಳು ಯಥಾವತ್ತಾಗಿ ಮುಂದುವರೆಯುತ್ತವೆ ಎಂದು ಆರ್. ಅಶೋಕ್ ಹೇಳಿದ್ದಾರೆ.
PublicNext
21/01/2022 03:52 pm