ಬೆಂಗಳೂರು: ವಿದ್ಯುತ್ ಹಾಗೂ ಹಾಲಿನ ದರ ಏರಿಕೆಯ ಬಗ್ಗೆ ಸದ್ಯ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಲೆ ಪರಿಷ್ಕರಣೆ ಬಗ್ಗೆ ಯಾವುದೇ ಅವಸರದ ತೀರ್ಮಾನ ತೆಗೆದುಕೊಳ್ಳುವುದಿಲ್ಲ. ಆಡಳಿತದಲ್ಲಿ ದರ ಏರಿಕೆಯ ಪ್ರಸ್ತಾಪಗಳು ಇದ್ದೇ ಇರುತ್ತವೆ. ಎಲ್ಲ ಆಯಾಮಗಳಿಂದಲೂ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಅವರು ಹೇಳಿದರು. ವಿದ್ಯುತ್ ದರ ಹೆಚ್ಚಳಕ್ಕಾಗಿ ಸದ್ಯ ಎಲ್ಲ ಎಸ್ಕಾಂಗಳು, ನೀರಿನ ದರ ಹೆಚ್ಚಳಕ್ಕಾಗಿ ಬೆಂಗಳೂರು ಜಲಮಂಡಳಿ, ಹಾಲಿನ ದರ ಹೆಚ್ಚಳಕ್ಕಾಗಿ ಕರ್ನಾಟಕ ಹಾಲು ಮಹಾಮಂಡಳಿ ದರ ಹೆಚ್ಚಳ ಪ್ರಸ್ತಾವನೆಯನ್ನು ಸರ್ಕಾರದ ಮುಂದೆ ಇಟ್ಟಿವೆ. ಈ ಕುರಿತು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದಾಗ ಬೊಮ್ಮಾಯಿ ಈ ರೀತಿ ಹೇಳಿಕೆ ನೀಡಿದ್ದಾರೆ.
PublicNext
22/01/2022 01:21 pm