ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಡ್ರೋನ್ ಆಧಾರಿತ ವಸತಿ, ಭೂಮಿ, ಆಸ್ತಿ ಸಮೀಕ್ಷೆ

ಬೆಂಗಳೂರು: ರಾಜ್ಯದಲ್ಲಿ ಡ್ರೋನ್ ಆಧರಿತ ವಸತಿ, ಭೂಮಿ ಹಾಗೂ ಆಸ್ತಿ ಸಮೀಕ್ಷೆ ನಡೆಸುವುದಕ್ಕೆ ರಾಜ್ಯ ಸರ್ಕಾರವು ಮುಂದಾಗಿದೆ.

ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಸ್ವಾಮಿತ್ವ ಯೋಜನೆಯಡಿ ಗ್ರಾಮೀಣ ವಸತಿ ಹಕ್ಕು ದಾಖಲೆ, ಕೃಷಿ ಭೂಮಿ ಹಕ್ಕು ದಾಖಲೆ ಹಾಗೂ ಪಟ್ಟಣ, ನಗರ ಆಸ್ತಿಗಳ ದಾಖಲೆಗಳನ್ನು ಸಿದ್ಧಪಡಿಸುವುದಕ್ಕಾಗಿ ಕೆಟಿಪಿಪಿ ಕಾಯ್ದೆ ಅನುಸರಿಸಿ ಅರ್ಹ ಖಾಸಗಿ ಏಜೆನ್ಸಿಗಳಿಂದ ಡ್ರೋನ್‌ ಅಥವಾ ವೈಮಾನಿಕ ಸಮೀಕ್ಷೆ ನಡೆಸಲು ಉದ್ದೇಶಿಸಲಾಗಿದೆ. ಯೋಜನೆಯನ್ನು 287 ಕೋ. ರೂ.ಗಳ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Edited By : Vijay Kumar
PublicNext

PublicNext

28/01/2022 10:44 am

Cinque Terre

95.69 K

Cinque Terre

1

ಸಂಬಂಧಿತ ಸುದ್ದಿ