ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನದಿ ಜೋಡಣೆಯಲ್ಲಿ ಕರ್ನಾಟಕದ ಸಮರ್ಪಕ ಪಾಲು ದೊರೆಯಬೇಕು: ಸಿಎಂ ಬೊಮ್ಮಾಯಿ

ನವದೆಹಲಿ: ನದಿ ಜೋಡಣೆ ವಿಚಾರದಲ್ಲಿ ಕರ್ನಾಟಕದ ಸಮರ್ಪಕ ಪಾಲು ದೊರೆಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, 'ರಾಜ್ಯ ನದಿ ಪಾತ್ರದಲ್ಲಿ ಉತ್ಪಾದನೆಯಾಗುವ ನೀರು, ನಮ್ಮ ಅಗತ್ಯ ಹಾಗೂ ಈಕ್ವಿಟಿ ಆಧರಿಸಿ ಪಾಲು ನಿರ್ಧಾರವಾಗಬೇಕೆನ್ನುವುದು ನಮ್ಮ ನಿಲುವು. ಡಿಪಿಆರ್ ಅಂತಿಮಗೊಳಿಸುವ ಮುನ್ನ ಎಲ್ಲಾ ರಾಜ್ಯಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಕೂಡ ಹೇಳಲಾಗಿದೆ. ಕರ್ನಾಟಕಕ್ಕೆ ನ್ಯಾಯ ಸಮ್ಮತವಾದ ಪಾಲನ್ನು ಪಡೆದುಕೊಳ್ಳಲು ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಜೀವನದಿಗಳಾಗಿರುವ ಕೃಷ್ಣ ಮತ್ತು ಕಾವೇರಿ ಜಲಾನಯನ ಪ್ರದೇಶಗಳ ಪ್ರಶ್ನೆಯಾಗಿರುವುದರಿಂದ ಈ ಬಗ್ಗೆ ನಮ್ಮ ನಿಲುವನ್ನು ಸ್ಪಷ್ಟಪಡಿಸಲಾಗಿದೆ. ಈ ಬಗ್ಗೆ ಯಾವುದೇ ರಾಜಿ ಇಲ್ಲ ಎಂದು ತಿಳಿಸಿದರು

Edited By : Nagesh Gaonkar
PublicNext

PublicNext

07/02/2022 07:26 pm

Cinque Terre

264.33 K

Cinque Terre

7

ಸಂಬಂಧಿತ ಸುದ್ದಿ