ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶೇ. 7.5 ಮೀಸಲಾತಿಗೆ ಒತ್ತಾಯಿಸಿ ನಾಳೆಯಿಂದಲೇ ಫ್ರೀಡಂ ಪಾರ್ಕ್ ನಲ್ಲಿ ಸತ್ಯಾಗ್ರಹ: ವಾಲ್ಮೀಕಿ ಶ್ರೀ ಎಚ್ಚರಿಕೆ

ದಾವಣಗೆರೆ: ವಾಲ್ಮೀಕಿ ಸಮಾಜಕ್ಕೆ ಶೇಕಡಾ 7.5 ಮೀಸಲಾತಿ ನೀಡುವಂತೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಾಳೆಯಿಂದಲೇ ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ.

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನಾನಂದಪುರಿ ಸ್ವಾಮೀಜಿ ಈ ಘೋಷಣೆ ಮಾಡಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ‌.

ಈ ಹಿಂದೆ ಯಡಿಯೂರಪ್ಪ ಸಿಎಂ ಆಗಿದ್ದಾಗ ಮೀಸಲಾತಿ ನೀಡುವುದಾಗಿ ಭರವಸೆ ನೀಡಿದ್ದರು. ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿ ಬಳಿಕ ಮೀಸಲಾತಿ ಕಲ್ಪಿಸುವುದಾಗಿ ಹೇಳಿದ್ದರು. ನಾಗಮೋಹನ್ ದಾಸ ವರದಿ ಸರ್ಕಾರಕ್ಕೆ ಸಲ್ಲಿಕೆ ಆಗಿದೆ. ಆದ್ರೆ ನಿರ್ಧಾರ ಮಾತ್ರ ಸರ್ಕಾರ ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದರು‌.

Edited By : Shivu K
PublicNext

PublicNext

09/02/2022 08:22 pm

Cinque Terre

106.81 K

Cinque Terre

3