ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೆಪಿಎಸ್‌ಸಿ ಸಂದರ್ಶನ ಅಂಕ 50 ರಿಂದ 25ಕ್ಕೆ ಕಡಿತ:ಸಂಪುಟ ನಿರ್ಧಾರ

ಬೆಂಗಳೂರು : ರಾಜ್ಯ ಸರ್ಕಾರವು ಕರ್ನಾಟಕ ಲೋಕಸೇವಾ ಆಯೋಗದ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮುಖ್ಯ ಪರೀಕ್ಷೆಯ ಸಂದರ್ಶನದ ಅಂಕ 50 ರಿಂದ 25ಕ್ಕೆ ಕಡಿತ ಮಾಡುವ ಮಹತ್ವದ ತೀರ್ಮಾನ ಕೈಗೊಂಡಿದೆ.

ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಪಿಎಸ್ ಸಿ ಮುಖ್ಯ ಪರೀಕ್ಷೆಯ ಸಂದರ್ಶನದ ವೇಳೆ ನಡೆಯುವ ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಸಂದರ್ಶನದಲ್ಲಿ ನೀಡುವ ಅಂಕಗಳನ್ನು 50 ರಿಂದ 25 ಕ್ಕೆ ಕಡಿತಗೊಳಿಸುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಯ ಮುಖ್ಯ ಪರೀಕ್ಷೆಯಲ್ಲಿ ಭಾರೀ ಬದಲಾವಣೆ ತರಲು ಸರ್ಕಾರ ಮುಂದಾಗಿದ್ದು, ಈ ಸಂಬಂಧ ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ಸ್ (ತಿದ್ದುಪಡಿ) ನಿಯಮಗಳು 2022 ಕ್ಕೆ ಸಂಪುಟ ಅನುಮೋದನೆ ನೀಡಿದೆ.

Edited By : Nagaraj Tulugeri
PublicNext

PublicNext

19/02/2022 03:30 pm

Cinque Terre

160.82 K

Cinque Terre

1

ಸಂಬಂಧಿತ ಸುದ್ದಿ