ಬೆಳಗಾವಿ: ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ಇಂದು 238 ಕಿ.ಮೀ ಉದ್ದದ 5 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಬೆಳಗಾವಿಯಲ್ಲಿ ಶಂಕುಸ್ಥಾಪನೆ ನೆರವೇರಿಸಿದರು.
ಇನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ, ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್, ಕೇಂದ್ರ ನವೀನ ಮತ್ತು ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ಸಂಸದೆ ಮಂಗಳಾ ಅಂಗಡಿ ಸೇರಿದಂತೆ ಇತರೆ ಜನ ಪ್ರತಿನಿಧಿಗಳು ಉಪಸ್ಥಿತರಿದ್ದರು.
PublicNext
28/02/2022 04:18 pm