ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯ ಬಜೆಟ್: ಬಿಬಿಎಂಪಿ ಎಲೆಕ್ಷನ್ ಹೊಸ್ತಿಲಲ್ಲಿ ಬೆಂಗಳೂರಿಗೆ ಭರ್ಜರಿ ಗಿಫ್ಟ್ ಕೊಟ್ಟ ಸಿಎಂ ಬೊಮ್ಮಾಯಿ

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಚೊಚ್ಚಲ ಬಜೆಟ್‌ನಲ್ಲಿ ರಾಜಧಾನಿ ಬೆಂಗಳೂರಿಗೆ ಬಂಪರ್ ಕೊಡುಗೆಗಳನ್ನು ನೀಡಿದ್ದಾರೆ. ಬೆಂಗಳೂರು ಸಮಗ್ರ ಅಭಿವೃದ್ಧಿಗೆ 8,409 ಕೋಟಿ ರೂ. ಮೀಸಲಿಡಲಾಗಿದ್ದು, ನಮ್ಮ ಮೆಟ್ರೋ, ಸಬ್‌ ಅರ್ಬನ್‌ ರೈಲು, ಪೆರಿಫೆರಲ್‌ ರಿಂಗ್‌ ರೋಡ್‌ ಮತ್ತಿತರ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಿದ್ದಾರೆ. ಅದಲ್ಲದೇ 10 ಸಾವಿರ ಜನರಿಗೆ ಉದ್ಯೋಗವಕಾಶ ಸೃಷ್ಟಿಸಲು ಬೆಂಗಳೂರಿನಲ್ಲಿ ಮೆಗಾ ಜ್ಯುವೆಲರಿ ಪಾರ್ಕ್‌ ಸ್ಥಾಪಿಸುವುದಾಗಿ ಸಿಎಂ ಘೋಷಿಸಿದ್ದಾರೆ.

ಮೆಟ್ರೋ ಹಂತ್ರ-3 ಯೋಜನೆಯನ್ನು 11,250 ಕೋಟಿ ರೂಪಾಯಿ ವೆಚ್ಚದಲ್ಲಿ ಕೇಂದ್ರದ ಅನುಮೋದನೆಗೆ ಸಲ್ಲಿಸಲಾಗುವುದು. ಹೆಬ್ಬಾಳದಿಂದ - ಜೆ‌ಪಿ ನಗರದವರೆಗೆ 32 ಕಿಮೀ ರಿಂಗ್ ರಸ್ತೆ ಮಾರ್ಗ ಹಾಗೂ ಹೊಸಹಳ್ಳಿಯಿಂದ-ಕಡಬಗೆರೆಗೆ 13 ಕಿಮೀ ಮಾರ್ಗ ನಿರ್ಮಿಸಲಾಗುವುದು. 2022-23ನೇ ಸಾಲಿನಲ್ಲಿ 37 ಕಿಮೀ ಉದ್ದದ ಸರ್ಜಾಪುರ, ಅಗರ, ಕೋರಮಂಗಲ, ಡೈರಿ ವೃತ್ತದ ಮೂಲಕ ಹೆಬ್ಬಾಳದವರೆಗೆ 15 ಸಾವಿರ ಕೋಟಿ ವೆಚ್ಚದಲ್ಲಿ 36 ಕಿಮೀ ಹೊಸ ಮಾರ್ಗಕ್ಕೆ ಡಿಪಿಆರ್ ತಯಾರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಬಜೆಟ್‌ನಲ್ಲಿ ಬೆಂಗಳೂರಿಗೆ ನೀಡಿರುವ ಕೊಡುಗೆಗಳು

* ಗೊರಗುಂಟೆಪಾಳ್ಯ ಗ್ರೇಡ್ ಸಪರೇಟರ್ ಮೇಲ್ಸೇತುವೆ ನಿರ್ಮಾಣಜ್ಕೆ ಬಿಬಿಎಂಪಿ, ಬಿಡಿಎ ಜಂಟಿ ಕಾಮಗಾರಿ, ಬಿಡಿಎ - ಕೆಂಪೇಗೌಡ ಬಡಾವಣೆಗೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಸ್ಮಾರ್ಟ್ ಸಿಟಿಯಾಗಿ ಅಭಿವೃದ್ಧಿ.

* ಸರ್‌ಎಂ ವಿಶ್ವೇಶ್ವರಯ್ಯ ಬಡಾವಣೆ ಬನಶಂಕರಿ 6ನೇ ಹಂತ ಅಂಜನಾಪುರ ಬಡಾವಣೆಯಕ್ಕಿ ರಸ್ತೆ, ಚರಂಡಿ ಕಾಮಗಾರಿಗೆ 404 ಕೋಟಿ ರೂ. ವೆಚ್ಚದಲ್ಲಿ ಬಿಡಿಎಯಿಂದ ನಿರ್ಮಾಣ ನಂತರ ಪಾಲಿಕೆಗೆ ಹಸ್ತಾಂತರ.

* ಬನಶಂಕರಿ ಜಂಕ್ಷನ್ ನಲ್ಲಿ 45 ಕೋಟಿ ರೂ. ವೆಚ್ಚದಲ್ಲಿ ಸ್ಕೈವಾಕ್ (ಪಾದಚಾರಿ-ರಸ್ತೆಬದಿ ವ್ಯಾಪಾರಿಗಳ ಸುರಕ್ಷತೆ ಹಾಗೂ ಮೆಟ್ರೋ ನಿಲ್ದಾಣವನ್ನು- ಬಸ್ ನಿಲ್ದಾಣದೊಂದಿಗೆ ಸಂಪರ್ಕಿಸಲು)

* ವೈಟ್ ಫೀಲ್ಡ್, ಕೆ.ಆರ್ ಪುರಂ, ಯಶವಂತಪುರ, ಜ್ಞಾನಭಾರತಿ, ಯಲಹಂಕ ನಿಲ್ದಾಣಗಳಲ್ಲಿ 55 ಕೋಟಿ ರೂ. ವೆಚ್ಚದಲ್ಲಿ ರೈಲ್ವೆಯೊಂದಿಗೆ ಮೆಟ್ರೋ ನಿಲ್ದಾಣದ ಸಂಪರ್ಕದ ಕಾಮಗಾರಿ (ಸಬ್ ಅರ್ಬನ್ ರೈಲ್ವೇ)

* 73 ಕಿಮೀ ಉದ್ದದ ಫೆರಿಫೆರಲ್ ರಿಂಗ್ ರಸ್ತೆಗೆ ಭೂಸ್ವಾಧೀನ ವೆಚ್ಚ ಸೇರಿ 21,091 ಕೋಟಿ ರೂ. ಈಗಾಗಲೇ ಅನುಮೋದನೆಯಾಗಿದ್ದುDBFOT ಮಾದರಿಯಲ್ಕಿ ಗುತ್ತಿಗೆದಾರರೇ ಭೂಸ್ವಾಧೀನ ಮತ್ತು ನಿರ್ಮಾಣ ವೆಚ್ಚ ಭರಿಸುವುದರೊಂದಿಗೆ ಟೆಂಡರ್ ಕರೆದು ಕಾಮಗಾರಿಗೆ ಚಾಲನೆ.

* ನಗರದ NGEFನ 105 ಎಕರೆ ಪ್ರದೇಶದಲ್ಲಿ ಸಿಂಗಾಪುರ್ ಮಾದರಿಯ ಗ್ರೀನ್ ಎಕ್ಸ್ ಪೋ ನಿರ್ಮಾಣ, ಆರು ಲಕ್ಷ "ಬಿ" ಖಾತಾಗಳನ್ನು ಎ ವಹಿಗೆ ದಾಖಲಿಸಲು ಭೂಕಂದಾಯ ನಿಯಮದಡಿ ಪರಿಶೀಲಿಸಿ ಕಾನೂನು ಕ್ರಮ. ಉಪನಗರ ರೈಲ್ವೇ ಯೋಜನೆಯನ್ನು 15,267 ಕೋಟಿ ರೂ. ವೆಚ್ಚದಲ್ಲಿ 2026ರ ವೇಳೆಗೆ ಪೂರ್ಣಗೊಳಿಸಲು ಉದ್ದೇಶ.

*ನಗರಕ್ಕೆ 775 ದಶಲಕ್ಷ ಲೀಟರ್ ಕಾವೇರಿ ನೀರು ತರಲು 5,550 ಕೋಟಿ ರೂ ವೆಚ್ಚದಲ್ಲಿ ಕಾವೇರಿ 5 ನೇ ಹಂತ ಜಾರಿಯಲ್ಲಿದ್ದು, 2024-25 ರೊಳಗೆ ಪೂರ್ಣಗೊಳಿಸಲಾಗುವುದು. ಹಳೇಯ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ ಉನ್ನತೀಕರಣಕ್ಕೆ 1500 ಕೋಟಿ ರೂ ವೆಚ್ಚ.

* ಎತ್ತಿನಹೊಳೆಯಿಂದ 1.7 ಟಿಎಂಸಿ ನೀರು ಬಳಸಿಕೊಳ್ಳಲು 312 ಕೋಟಿಯ ಟಿಜಿ ಹಳ್ಳಿ ಕಾಮಗಾರಿ 22-23ರಲ್ಲಿ ಮುಕ್ತಾಯ. ನಗರದ ರಾಜಕಾಲುವೆ ಅಭಿವೃದ್ಧಿಪಡಿಸಿ ನಾಗರಿಕರ ವಿಹಾರ ತಾಣವಾಗಿಸಲು 195 ಕೋಟಿ ರೂ ವೆಚ್ಚದಲ್ಲಿ ಕೋರಮಂಗಲ ರಾಜಕಾಲುವೆಯನ್ನು ಅಭಿವೃದ್ಧಿಪಡಿಸಲಾಗ್ತಿದೆ.

* ನಗರದಲ್ಕಿ ಪ್ರವಾಹ ಪರಿಸ್ಥಿತಿ ತಡೆಯಲು ರಾಜಕಾಲುವೆ ಅಭಿವೃದ್ಧಿಗೆ 1,500 ಕೋಟಿ ರೂ. ಮೊತ್ತದಲ್ಲಿ ಯೋಜನೆ, ನಗರದ 4 ಭಾಗಗಳಲ್ಲಿ 500 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ

* ಬೆಂಗಳೂರಿನಲ್ಲಿ 20 ಪಬ್ಲಿಕ್ ಶಾಲೆ ಅಭಿವೃದ್ಧಿಪಡಿಸಲು 89 ಕೋಟಿ ರೂ. ಮೀಸಲು, ಮಡಿವಾಳ ಕೆರೆ- ಎಲೆ ಮಲ್ಲಪ್ಪ ಶೆಟ್ಟಿ ಕೆರೆ ಅಭಿವೃದ್ಧಿಗೆ ಪಾಲಿಕೆಯಿಂದ ರೂಪುರೇಷೆ ಸಿದ್ಧತೆ, ಒಟ್ಟಾರೆಯಾಗಿ ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ 8,409 ಕೋಟಿ ರೂ. ಅನುದಾನ ನೀಡಲಾಗಿದೆ.

Edited By : Vijay Kumar
PublicNext

PublicNext

04/03/2022 06:47 pm

Cinque Terre

28.8 K

Cinque Terre

1

ಸಂಬಂಧಿತ ಸುದ್ದಿ