ಚಂಡೀಗಡ: ಪಂಜಾಬ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಭಗವಂತ್ ಮಾನ್ ಒಂದಿಲ್ಲೊಂದು ಹೊಸ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಈಗಾಗಲೇ ಭ್ರಷ್ಟಾಚಾರ ತಡೆಗೆ ರಾಜ್ಯದ ಜನರಿಗೆ ಭ್ರಷ್ಟಾಚಾರ ವಿರೋಧಿ ಸಹಾಯವಾಣಿ ಆರಂಭ ಮಾಡಿರುವ ಆಮ್ ಆದ್ಮಿ, ಇಂದಿನ ಚೊಚ್ಚಲ ಸಚಿವ ಸಂಪುಟದಲ್ಲಿ 25 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿ ಪ್ರಸ್ತಾವನೆಯನ್ನು ಅಂಗೀಕಾರ ಮಾಡಲಾಗಿದೆ.
ಭಗವಂತ್ ಮಾನ್ ಕ್ಯಾಬಿನೆಟ್ಗೆ ಇಂದು ಬೆಳಗ್ಗೆ 10 ಶಾಸಕರು ಸಚಿವರಾಗಿ ಸೇರ್ಪಡೆಯಾಗಿದ್ದು, ಇದರ ಬೆನ್ನಲ್ಲೇ ಅವರೊಂದಿಗೆ ಚೊಚ್ಚಲ ಸಚಿವ ಸಂಪುಟ ಸಭೆ ನಡೆಸಲಾಯಿತು. ಈ ವೇಳೆ, ಪಂಜಾಬ್ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 10 ಸಾವಿರ ಹುದ್ದೆ ಹಾಗೂ ಇತರೆ ಇಲಾಖೆಯಲ್ಲಿನ 15 ಸಾವಿರ ಹುದ್ದೆ ಸೇರಿ ಒಟ್ಟು 25 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿ ಪ್ರಸ್ತಾವನೆಯನ್ನ ಕ್ಯಾಬಿನೆಟ್ನಲ್ಲಿ ಅಂಗೀಕಾರ ಮಾಡಲಾಗಿದೆ. ಹೀಗಾಗಿ ಮುಂದಿನ ಕೆಲ ದಿನಗಳಲ್ಲೇ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ.
PublicNext
19/03/2022 06:27 pm