ಚೆನ್ನೈ: ತಮಿಳುನಾಡು ರಾಜ್ಯದಲ್ಲಿ ರಸ್ತೆ ಅಪಘಾತಕ್ಕೆ ಒಳಗಾಗಿ ಗಾಯಗೊಂಡವರಿಗೆ ವೈದ್ಯಕೀಯ ಸೌಲಭ್ಯ ಒದಗಿಸಲು ಸಹಾಯ ಮಾಡುವವರಿಗೆ 5,000 ರೂ. ನಗದು ಬಹುಮಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಸೋಮವಾರ ಹೇಳಿದ್ದಾರೆ.
ಸಿಎಂ ಸ್ಟಾಲಿನ್ ಅವರು ಭಾನುವಾರವಷ್ಟೇ ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ನೀಡುವ ‘ಇನ್ನುಯಿರ್ ಕಪ್ಪೊನ್’ (ಜೀವ ರಕ್ಷಕ) ಯೋಜನೆಗೆ ಚಾಲನೆ ನೀಡಿದ್ದರು. ಈ ಬೆನ್ನಲ್ಲೇ ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ಸಹಾಯ ಮಾಡಿದವರಿಗೆ 5,000 ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
PublicNext
21/03/2022 10:54 pm