ಮುಂಬೈ: ಸ್ಥಳೀಯ ಸಂಸ್ಥೆಗಳ ಆಡಳಿತದಲ್ಲಿ ಮರಾಠಿ ಬಳಕೆಯನ್ನು ಕಡ್ಡಾಯಗೊಳಿಸುವ ಮಸೂದೆಯನ್ನು ಮಹಾರಾಷ್ಟ್ರದ ವಿಧಾನಸಭೆ ಹಾಗೂ ಪರಿಷತ್‌ನಲ್ಲಿ ಅವಿರೋಧವಾಗಿ ಗುರುವಾರ ಅಂಗೀಕರಿಸಲಾಯಿತು.
ಈ ಸಂಬಂಧ ವಿಧಾನ ಪರಿಷತ್‌ನಲ್ಲಿ ಮಾತನಾಡಿದ ಸಚಿವ ಸುಭಾಷ್ ದೇಸಾಯಿ, "ಮಹಾರಾಷ್ಟ್ರ ಆಡಳಿತ ಭಾಷೆ ಕಾಯ್ದೆ–1964ರ ಪ್ರಕಾರ ಸ್ಥಳೀಯ ಸಂಸ್ಥೆಗಳ ಆಡಳಿತದಲ್ಲಿ ಮರಾಠಿ ಭಾಷೆ ಬಳಕೆ ಕಡ್ಡಾಯ ಇರಲಿಲ್ಲ. ಈ ಲೋಪವನ್ನು ಸರಿಪಡಿಸುವ ಪ್ರಯತ್ನದ ಭಾಗವಾಗಿ ಮಸೂದೆಯನ್ನು ಅಂಗೀಕರಿಸಲಾಗಿದೆ. ವಿದೇಶಗಳ ರಾಯಭಾರಿಗಳ ಜೊತೆ ಸಂವಹನ ಹಾಗೂ ಸರ್ಕಾರದ ನಿರ್ದಿಷ್ಟ ಕಾರ್ಯಗಳಿಗಾಗಿ ಇಂಗ್ಲಿಷ್ ಅಥವಾ ಹಿಂದಿ ಬಳಸಲು ಅನುಮತಿ ನೀಡಲಾಗಿದೆ' ಎಂದು ತಿಳಿಸಿದ್ದಾರೆ.
PublicNext
24/03/2022 04:32 pm