ಮುಂಬಯಿ : ಮಸೀದಿಗಳ ಮೇಲಿನ ಮೈಕ್ ಗಳ ಸೌಂಡ್ ಗೆ ಸಂಬಂಧಿಸಿದಂತೆ ಈಗಾಗಲೇ ಸಾಕಷ್ಟು ವಾದ ವಿವಾದಗಳು ನಡೆಯುತ್ತಿದೆ.
ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕುವಂತೆ ಮಹಾರಾಷ್ಟ್ರ ನವನಿರ್ಮಾಣ ಸೇನೆ ನಾಯಕ ರಾಜ್ ಠಾಕ್ರೆ ಒತ್ತಾಯಿಸಿದ ಬೆನ್ನಲ್ಲೇ ಮಹಾರಾಷ್ಟ್ರ ಮೈತ್ರಿ ಸರ್ಕಾರ ಕ್ರಮ ಕೈ ಗೊಳ್ಳಲು ಮುಂದಾಗಿದೆ.
ರಾಜ್ಯ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್ ಸೋಮವಾರ, ಮಹಾರಾಷ್ಟ್ರ ಪೊಲೀಸ್ ಮಹಾನಿರ್ದೇಶಕರು ಮತ್ತು ಮುಂಬೈ ಪೊಲೀಸ್ ಕಮಿಷನರ್ ಅವರು ಧ್ವನಿವರ್ಧಕಗಳ ಬಳಕೆಗೆ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಿದ್ದು, ಅದನ್ನು ಒಂದೆರಡು ದಿನಗಳಲ್ಲಿ ನೀಡಲಾಗುವುದು ಎಂದು ಹೇಳಿದ್ದಾರೆ.
ರಾಜ್ ಠಾಕ್ರೆ ಅವರು ಮೇ 3 ರೊಳಗೆ ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದು ಹಾಕಲು ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ಆಗ್ರಹಿಸಿದ್ದರು, ಇತರ ಸಮುದಾಯಗಳ ಸದಸ್ಯರು ದೊಡ್ಡ ಧ್ವನಿಯ ಮುಸ್ಲಿಮರ ಪ್ರಾರ್ಥನೆಯನ್ನು ಕೇಳಲು ಇಷ್ಟವಿಲ್ಲ ಎಂದು ವಾದಿಸಿ ಮೇ 3ರ ನಂತರ ಹೆಚ್ಚಿನ ಪ್ರಮಾಣದಲ್ಲಿ ಮಸೀದಿಗಳ ಹೊರಗೆ ಹನುಮಾನ್ ಚಾಲೀಸಾ ಮೊಳಗಿಸುಸುವುದಾಗಿ ಬೆದರಿಕೆ ಹಾಕಿದ್ದರು.
PublicNext
18/04/2022 04:27 pm