ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು: ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಮೈಸೂರು:ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಖಂಡನೆ ಹಾಗೂ ರಾಜ್ಯ ಸರ್ಕಾರದ 40% ಕಮಿಷನ್ ಹಗರಣದ ತನಿಖೆ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಮೈಸೂರಿನಲ್ಲಿ ಇಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಪ್ರತಿಭಟನಾ ಸಭೆಯ ಬಳಿಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಪಾದಯಾತ್ರೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ, ಮಾಜಿ ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ, ತನ್ವೀರ್ ಸೇಠ್, ನರೇಂದ್ರ ಸ್ವಾಮಿ, ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಅನಿಲ್ ಚಿಕ್ಕಮಾದು, ಡಾ.ತಿಮ್ಮಯ್ಯ, ಮಾಜಿ ಶಾಸಕರಾದ ವೆಂಕಟೇಶ್, ವಾಸು, ಸೋಮಶೇಖರ್, ಮಾಜಿ ಸಂಸದ ಶಿವಣ್ಣ, ನಗರ ಕಾಂಗ್ರೆಸ್ ಅಧ್ಯಕ್ಷ ಮೂರ್ತಿ, ಗ್ರಾಮಾಂತರ ಜಿಲ್ಲಾಧ್ಯಕ್ಷ ಡಾ. ವಿಜಯಕುಮಾರ್ ಹಾಜರಿದ್ದರು.

Edited By :
PublicNext

PublicNext

20/04/2022 08:26 pm

Cinque Terre

98.68 K

Cinque Terre

7